ಬೆಂಗಳೂರಿನ ಚಿಲುಮೆ ಸಂಸ್ಥೆ ವಿರುದ್ಧ ಮತದಾರರ ಮಾಹಿತಿ ಕಳ್ಳತನ ಆರೋಪ ಬೆನ್ನಲ್ಲೇ ಕೇಂದ್ರ ಚುನಾವಣಾ ಆಯೋಗವು ಬೆಂಗಳೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಗೆ ಬರುವ ಮೂರು ಎಸಿ (ಅಸಿಸ್ಟೆಂಟ್ ಕಮಿಷನರ್)ಗಳನ್ನೂ ಕೂಡ ಅಮಾನತ್ತು ಮಾಡಲಾಗಿದೆ.
ಬೆಂಗಳೂರು ಸೆಂಟ್ರಲ್, ಹೆಚ್ಚುವರಿ ಜಿಲ್ಲಾ ಚುನಾವಣಾ ಅಧಿಕಾರಿ, ಬೆಂಗಳೂರು ನಗರ ಜಿಲ್ಲೆಯ ಮೂವರು ಸಹಾಯಕ ಚುನಾವಣಾ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದೆ. ಜೊತೆಗೆ ಇನ್ನಿಬ್ಬರು ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ ನೀಡಿದೆ. ವಿ ವಿ, ಪದವಿ ಕಾಲೇಜುಗಳಲ್ಲಿ ಹರ್ ಘರ್ ಧ್ಯಾನ್ ಅಭಿಯಾನಕ್ಕೆ ಕೇಂದ್ರದ ನಿರ್ಧಾರ
ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಡಿಲಿಟ್ ಮತ್ತು ಹೊಸ ಸೇರ್ಪಡೆಯಾಗಿರುವ ಮತಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ. ಶಿವಾಜಿನಗರ, ಮಹದೇವಪುರ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಡಿಲೀಟ್ ಆಗಿರುವ ಮತಗಳ ಬಗ್ಗೆ ಪರಿಶೀಲಿಸುವಂತೆ ರಾಜ್ಯ ಮುಖ್ಯಚುನಾವಣಾ ಅಧಿಕಾರಿಗೆ ಸೂಚನೆ ನೀಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ