ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ ಉದ್ಘಾಟಿಸಿದ ಪ್ರಧಾನಿ ಮೋದಿ

Team Newsnap
1 Min Read

118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಯನ್ನು ಪ್ರಧಾನಿ ಮೋದಿ ಅಧಿಕೃತವಾಗಿ ಭಾನುವಾರ ಮಂಡ್ಯದ ಹನಕೆರೆ ಬಳಿ ಉದ್ಘಾಟನೆ ಮಾಡಿದರು

8,479 ಕೋಟಿ ರೂ. ವೆಚ್ಚದಲ್ಲಿ ಎಕ್ಸ್‌ಪ್ರೆಸ್‌ ಹೈವೇ ನಿರ್ಮಾಣವಾಗಿದೆ.ಹೈವೇ ಉದ್ಘಾಟನೆ ವೇಳೆ ಪ್ರಧಾನಿ ಮೋದಿಗೆ ಕಲಾತಂಡಗಳಿಂದ ಸ್ವಾಗತ ಕೋರಲಾಯಿತು. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಧಾನಿ ಮೋದಿಯವನ್ನು ಸನ್ಮಾನಿಸಿದರು. ಮಂಡ್ಯದಲ್ಲಿ ಮೋದಿ ರೋಡ್ ಶೋ –ಅಭಿಮಾನಿಗಳಿಗೆ ಪ್ರಧಾನಿ ಪುಷ್ಪಾರ್ಚನೆ

ಪ್ರಧಾನಮಂತ್ರಿಯವರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗವನ್ನು 6 ಪಥದಲ್ಲಿ ಅಭಿವೃದ್ಧಿಪಡಿಸುವುದನ್ನು ಒಳಗೊಂಡಿದೆ.ರಾಜ್ಯದ ಗ್ರಾ.ಪಂಗಳಲ್ಲಿ 12 ಸಾವಿರ `ವಿವೇಕಾನಂದ’ ಸ್ವಸಹಾಯ ಗುಂಪು’ ರಚನೆ : 5 ಲಕ್ಷ ಸಾಲ, 1 ಲಕ್ಷ ಸಬ್ಸಿಡಿ

118 ಕಿ.ಮೀ ಉದ್ದವನ್ನು ಹೊಂದಿದೆ. ಈ ಯೋಜನೆಯನ್ನು ಸುಮಾರು 8480 ಕೋಟಿ ರೂ.ಗಳ ಒಟ್ಟು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಇದು ಬೆಂಗಳೂರು- ಮೈಸೂರು ನಡುವೆ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಬೆಂಗಳೂರು ಮತ್ತು ಮೈಸೂರು ನಡುವೆ ಸುಮಾರು 3 ಗಂಟೆಗಳಿಂದ ಸುಮಾರು 75 ನಿಮಿಷಗಳವರೆಗೆ ಈ ಎಕ್ಸ್ ಪ್ರೆಸ್ ವೇ ಮೂಲಕ ತಲುಪಬಹುದಾಗಿದೆ.

Share This Article
Leave a comment