ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್‍ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿ ಧೀರಜ್ ಬಂಧಿತ ಎಂಜಿನಿಯರ್.
ಆನ್‍ಲೈನ್ ಟ್ರೇಡಿಂಗ್‍ನಲ್ಲಿ ಹಣ ಹಾಕಿದ್ದ ಎಂಜಿನಿಯರ್ ಧೀರಜ್ ಸುಮಾರು 40 ಲಕ್ಷ ರು ಕಳೆದುಕೊಂಡು ಸಾಲ ಸುಳಿಗೆ ಸಿಲುಕಿದ್ದ. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡುವುದಕ್ಕೆ ಪ್ಲಾನ್ ಮಾಡಿದ್ದಾನೆ. ಅದರಂತೆ ಯೂಟ್ಯೂಬ್‍ಗಳಲ್ಲಿ ಹೇಗೆ ರಾಬರಿ ಮಾಡಬೇಕು ಅಂತಾ ವಿಡಿಯೋಗಳನ್ನು ನೋಡಿದ್ದಾನೆ.
ನಂತರ ಮಡಿವಾಳದ ಬಿಟಿಎಂ ಲೇಔಟ್‍ನ ಎಸ್‍ಬಿಎಂ ಬ್ಯಾಂಕ್ ಬಾಗಿಲು ಹಾಕುವ ವೇಳೆಗೆ ಪ್ರವೇಶ ಮಾಡಿದ ಎಂಜಿನಿಯರ್ ಕಳ್ಳ ಮ್ಯಾನೇಜರ್ ಮತ್ತು ಓರ್ವ ಮಹಿಳಾ ಸಿಬ್ಬಂದಿಯನ್ನು ಬೆದರಿಸಿ 3.75 ಲಕ್ಷ ನಗದು, 1.8 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ.
ನಂತರ ಪೊಲೀಸರ ಕೈಗೆ ಸಿಗದಂತೆ ಬೇರೆ, ಬೇರೆ ಕಡೆಗಳಲ್ಲಿ ಸುತ್ತಾಡುತ್ತಿದ್ದನು.
ಪೊಲೀಸರ ತನಿಖೆ ವೇಳೆ ಆರೋಪಿ ಧೀರಜ್ ಸಾಲಗಾರರಿಗೆ ಹಣ ಹಿಂತಿರುಗಿಸುತ್ತಿರುವ ವಿಚಾರ ತಿಳಿದು ಸಾಲಗಾರರ ಬಗ್ಗೆ ಮಾಹಿತಿ ಕಲೆಹಾಕಿದರು.
ಐದು ದಿನಗಳ ನಂತರ ನಗರದ ವ್ಯಕ್ತಿಯೊಬ್ಬರಿಗೆ ಸಾಲ ಹಿಂತಿರುಗಿಸಲು ಬಂದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಧೀರಜ್‍ನ ವಶಕ್ಕೆ ಪಡೆದ ಪೊಲೀಸರು, 85 ಲಕ್ಷ ಮೌಲ್ಯದ ಚಿನ್ನಭರಣ ನಗದು ವಶಕ್ಕೆ ಪಡೆದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು