ರಾಜ್ಯದಲ್ಲಿ 3 ನೇ ಹಂತದ ಅನ್ಲಾಕ್ ಸಂಬಂಧ ಬಾರ್, ಮಾಲ್ಗಳು, ದೇವಸ್ಥಾನಗಳನ್ನು ತೆರೆಯಲು ಜುಲೈ 5 ರಿಂದ ಜು. 19ರ ವರೆಗೆ ಅವಕಾಶ ನೀಡಲಾಗಿದೆ. ಚಿತ್ರ ಮಂದಿರಗಳನ್ನು ತೆರೆಯಲು ಸದ್ಯಕ್ಕೆ ಅನುಮತಿ ಇಲ್ಲ.
- ಇದು ಜುಲೈ 5 ರಿಂದ ಜಾರಿ ಬರಲಿರುವ ಅನ್ ಲಾಕ್ ಪ್ರಮುಖ ನಿರ್ಧಾರ ಗಳು.
ಅನ್ಲಾಕ್ ಸಂಬಂಧ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ಪ್ರಮುಖ ನಿರ್ಧಾರ ಗಳನ್ನು ಪ್ರಕಟಿಸಿದರು.
- ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
- ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
- ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.
- ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
- ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
- ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
- ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
- ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
- ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
- ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
- ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
- ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
- ಪಬ್ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
- ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ