ಬಾರ್, ಮಾಲ್​​, ದೇವಸ್ಥಾನ ಓಪನ್ :ಚಿತ್ರ ಮಂದಿರ ಬಂದ್ ವೀಕೆಂಡ್ ಕರ್ಫ್ಯೂ ರದ್ದು – ಸಿಎಂ ಘೋಷಣೆ

Team Newsnap
1 Min Read

ರಾಜ್ಯದಲ್ಲಿ‌ 3 ನೇ ಹಂತದ ಅನ್​ಲಾಕ್ ಸಂಬಂಧ ಬಾರ್, ಮಾಲ್​ಗಳು, ದೇವಸ್ಥಾನಗಳನ್ನು ತೆರೆಯಲು ಜುಲೈ 5 ರಿಂದ ಜು. 19ರ ವರೆಗೆ ಅವಕಾಶ ನೀಡಲಾಗಿದೆ. ಚಿತ್ರ ಮಂದಿರಗಳನ್ನು ತೆರೆಯಲು ಸದ್ಯಕ್ಕೆ ಅನುಮತಿ ಇಲ್ಲ.

  • ಇದು ಜುಲೈ 5 ರಿಂದ ಜಾರಿ ಬರಲಿರುವ ಅನ್ ಲಾಕ್ ಪ್ರಮುಖ ನಿರ್ಧಾರ ಗಳು.

ಅನ್​ಲಾಕ್ ಸಂಬಂಧ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿ.ಎಸ್​. ಯಡಿಯೂರಪ್ಪ ಪ್ರಮುಖ ನಿರ್ಧಾರ ಗಳನ್ನು ಪ್ರಕಟಿಸಿದರು.

  • ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
  • ಮಾಲ್​ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
  • ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ನೀಡಲಾಗಿದೆ.
  • ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ.
  • ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ.
  • ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
  • ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ.
  • ಅಂತ್ಯ ಸಂಸ್ಕಾರಕ್ಕೆ 20 ಸದಸ್ಯರು ಭಾಗವಹಿಸಲು ಅವಕಾಶ ನೀಡಲಾಗಿದೆ.
  • ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
  • ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ.
  • ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ, ಪ್ರತಿಭಟನೆಗಳಿಗೆ ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
  • ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನಿಸಲಾಗುವುದು.
  • ಪಬ್​ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ. ಬಾರ್​ಗಳು ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
  • ಚಿತ್ರಮಂದಿರಗಳು ಕಾರ್ಯನಿರ್ವಹಣೆಗೆ ಅವಕಾಶವಿಲ್ಲ.
Share This Article
Leave a comment