ಗದಗ : ದಾಸರ ಓಣಿಯಲ್ಲಿ ನಗರಸಭೆ ಉಪಾಧ್ಯಕ್ಷೆ ಕುಟುಂಬದ ನಾಲ್ವರ ಬರ್ಬರ ಹತ್ಯೆಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ಬೇಟಗೇರಿ ನಗರಸಭೆ ಉಪಾಧ್ಯಕ್ಷೆ ಕುಟುಂಬದ ನಾಲ್ವರ ಹತ್ಯೆಯಾಗಿದ್ದು , ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55) ಪತ್ನಿ ಲಕ್ಷ್ಮಿ (45), ಪುತ್ರಿ ಆಕಾಂಕ್ಷಾ (16) ಕೊಲೆಯಾಗಿದ್ದಾರೆ.
ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್‌ನ ಮದುವೆ ಸಹ ನಡೆದಿದ್ದು ,ವಿವಾಹ ಕಾರ್ಯಕ್ರಮಕ್ಕಾಗಿ ಸಂಬಂಧಿಕರು ಆಗಮಿಸಿದ್ದರು.
ದುಷ್ಕರ್ಮಿಗಳು ಕೊಲೆಗೆ ಬಳಸಿದ್ದ ಮಾರಕಾಸ್ತ್ರಗಳನ್ನು ಚರಂಡಿಯಲ್ಲಿ ಎಸೆದು ಹೋಗಿರುವುದು ತನಿಖೆ ವೇಳೆ ಪತ್ತೆಯಾಗಿದೆ.
ತಡರಾತ್ರಿ ರಾತ್ರಿ 2 ರಿಂದ 3 ಗಂಟೆ ಸಮಯದಲ್ಲಿ ಕೊಲೆ ಆಗಿದ್ದು ,ಮಾರಕಾಸ್ತ್ರಗಳಿಂದ ಹತ್ಯೆಯಾಗಿದೆ.ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
ಸ್ಥಳಕ್ಕೆ ಶ್ವಾನದಳ, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ