ಮೀನಾ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಏಕೈಕ ವಿದ್ಯಾರ್ಥಿನಿಯಾಗಿದ್ದು ,ಪರೀಕ್ಷೆಯಲ್ಲಿ ಪಾಸ್ ಗುವ ಮೂಲಕ ತನ್ನ ಶಾಲೆಗೆ 100% ಫಲಿತಾಂಶ ತಂದು ಕೊಟ್ಟಿದ್ದಳು.
ಮೀನಾ ತಾನು ಪಾಸಾದ ಖುಷಿಯಲ್ಲಿ ಶಾಲೆಯತ್ತ ಬಂದು ಮನೆಗೆ ಹೋಗುತ್ತಿದ್ದ ವೇಳೆ ಕಿರಾತಕನೋರ್ವ ಆಕೆಯನ್ನು ಅಡ್ಡಗಟ್ಟಿ ಹತ್ಯೆ ಮಾಡಿದ್ದಾನೆ .
ಪೋಷಕರು ಅಪ್ರಾಪ್ತ ಬಾಲಕಿಯ ವಿವಾಹ ಮಾಡುವುದಕ್ಕೆ ಸಿದ್ಧತೆ ನಡೆಸಿದ್ದು ,ಈ ವಿಷಯ ಗ್ರಾಮಸ್ಥರ ಗಮನಕ್ಕೆ ಬಂದಿತ್ತು .ಸೋಮವಾರಪೇಟೆ ಪೊಲೀಸರಿಂದ ಅಪ್ರಾಪ್ತ ಬಾಲಕಿಯ ಎಂಗೆಜ್‌ಮೆಂಟ್ ತಡೆಯಲಾಗಿತ್ತು.
ಶಾಲೆಗೆ ಹೋಗಿ ಬರುವ ವೇಳೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗಬೇಕಾಗಿದ್ದ ಯುವಕ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಎಸ್ ಎಸ್ ಎಲ್ ಸಿ ಕಡಮೆ ಅಂಕ : ಮದ್ದೂರಿನಲ್ಲಿ ಇಬ್ಬರ ವಿದ್ಯಾರ್ಥಿ ಗಳು ಆತ್ಮಹತ್ಯೆ
ಸೋಮವಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ,ಹತ್ಯೆ ಮಾಡಿದ ಅರೋಪಿಯ ಪತ್ತೆಗಾಗಿ ಬಲೆ ಬಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು