ನಾಗಮಂಗಲ ತಾಲೂಕಿನ ತಿರುಮಲಾಪುರ ಗ್ರಾಮದ 23 ವರ್ಷದ ಅರವಿಂದ್ ಈ ದುರ್ಘಟನೆಯ ಬಲಿಯಾಗಿದ್ದು, ಚಿನಕುರುಳಿ ಗ್ರಾಮದ ಕುಮಾರ್ ಎಂಬುವರ ಬಾಡಿಗೆ ಮನೆಯಲ್ಲಿ ತನ್ನ ಸ್ನೇಹಿತರ ಜೊತೆ ವಾಸವಿದ್ದ. ರಾತ್ರಿ ಮದ್ಯ ಸೇವಿಸಿದ ನಂತರ ಮಲಗಿದ್ದ ಅರವಿಂದ್‌ನನ್ನು, ಅವನ ಜೊತೆಯಲ್ಲಿದ್ದ ಸ್ನೇಹಿತರಾದ ವಿಜಯ್ ಮತ್ತು ಏಳುಮಲೈ ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಹತ್ಯೆಗೆ ಒಳಗಾದ ಇಬ್ಬರು ಆರೋಪಿ ಸ್ನೇಹಿತರು ಕೂಡ ತಿರುಮಲಾಪುರದವರಾಗಿದ್ದು, ಅರವಿಂದ್ ಅವರ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರಣ ಈ ಕೃತ್ಯ ಎಸಗಿದ್ದಾರೆ .
ಪಾಂಡವಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು