ಬೆಂಗಳೂರಿನಲ್ಲಿ ಈಗ ಲಿವಿಂಗ್ ಟುಗೆದರ್ ( Living Together ) ಕಲಹ ಹೆಚ್ಚಾಗ್ತಿದೆಯಂತೆ. ಅದರಲ್ಲೂ ಲಿವಿಂಗ್ ಟುಗೆದರ್ ಜೋಡಿಗಳಲ್ಲಿ ಕಲಹ ಉಂಟಾಗಿ ಅನೇಕ ಹೆಣ್ಣುಮಕ್ಕಳು ಮಹಿಳಾ ಆಯೋಗದ ಮೆಟ್ಟಿಲೇರುತ್ತಿದ್ದಾರಂತೆ.
ಕಾಲೇಜ್, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾಗಿ ಲಿವಿಂಗ್ ಟುಗೆದರ್ ನಿರ್ಧಾರವನ್ನು ತೆಗೆದುಕೊಂಡು ಒಟ್ಟಾಗಿ ಒಂದೇ ಮನೆಯಲ್ಲಿ ಜೀವನ ಸಾಗಿಸ್ತಾರೆ. ಆದರೆ ವರ್ಷ ಕಳೆಯುವ ವೇಳೆಗೆ ಗಲಾಟೆ ಶುರುವಾಗಿ ಹೆಣ್ಣುಮಕ್ಕಳು ನ್ಯಾಯ ಕೊಡಿಸಿ ಅಂತಾ ಆಯೋಗದ ಮೆಟ್ಟಿಲೇರುತ್ತಿದ್ದಾರಂತೆ.
ಲಿವಿಂಗ್ ಟುಗೆದರ್ ಚಾಳಿಯಿಂದ ಹೆಣ್ಣುಮಕ್ಕಳು ತಮ್ಮ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿದ್ದಾರೆ. ಇನ್ನು ಇಂತಹ ಕೇಸ್‍ನಲ್ಲಿ ನ್ಯಾಯ ಒದಗಿಸುವುದು ಕೂಡ ಕಷ್ಟ ಎಂದು ಆಯೋಗದ ಅಧ್ಯಕ್ಷರು ಹೇಳುತ್ತಾರೆ.ವೀರಗಾಸೆ ವಿವಾದ: ಡಾಲಿ ಕಟೌಟ್‌ಗೆ ಚಪ್ಪಲಿ ಹಾರ ಹಾಕಿ ಭಜರಂಗದಳ ಪ್ರತಿಭಟನೆ
ಇನ್ನು ಪ್ರಮುಖವಾಗಿ ವಿದ್ಯಾರ್ಥಿನಿಯರಲ್ಲಿ, ಮಹಿಳೆಯರು ಕಾರ್ಯನಿರ್ವಹಿಸುವ ಸ್ಥಳದಲ್ಲಿ ಈಗಾಗಲೇ ಲಿವಿಂಗ್ ಟುಗೆದರ್ ಮೋಸದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಹಿಳಾ ಆಯೋಗ ಮಾಡಲು ನಿರ್ಧರಿಸಿದ್ದು ಹಲವಡೆ ಪ್ರಾಯೋಗಿಕವಾಗಿ ಆರಂಭಿಸಿದೆ.
ಲಿವಿಂಗ್ ಟುಗೆದರ್ ಚಾಳಿಯಿಂದಾಗಿ ಮಹಿಳೆಯರು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಕೂಡ ಸಮಸ್ಯೆಯಾಗುತ್ತಿದೆ. ಖಿನ್ನತೆಯಂತಹ ಸಮಸ್ಯೆ ಕೂಡ ಎದುರಿಸುತ್ತಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು