ಸ್ವಾಮಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 2 ಪುಟಗಳ ಡೆತ್ ನೋಟ್ ಕೂಡಾ ಬರೆದಿದ್ದಾರೆ ಅದರಲ್ಲೂ ಹಲವರ ಹೆಸರನ್ನು ಬರೆದಿದ್ದು. ಆದರೆ ಪ್ರಕರಣಕ್ಕೆ ಸಂಬಂಧಿಸಿ ಕುದೂರು ಪೊಲೀಸರು ಅನಾಮಧೇಯನ ಹೆಸರಿನ ಮೇಲೆ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು.ಬಲಿಪಾಡ್ಯಮಿ – ದಾನವ ಅರಸ ಬಲೀಂದ್ರನ ಪೂಜೆ
ಸ್ವಾಮಿ ನೇಣಿಗೆ ಶರಣಾಗುವ ಮುನ್ನ ಇಬ್ಬರು ವ್ಯಕ್ತಿಗಳು ಭೇಟಿ ಆಗಿದ್ದ ವಿಚಾರ ಬೆಳಕಿಗೆ ಬಂದಿತ್ತು. ಆದರೆ ಆ ಇಬ್ಬರು ವ್ಯಕ್ತಿಗಳು ಯಾರು ಎಂಬುದು ಇನ್ನೂ ಬಯಲಾಗಿಲ್ಲ. ಆದರೆ ದಿನ ಸುಮಾರು ಅರ್ಧಗಂಟೆಗೂ ಹೆಚ್ವು ಕಾಲ ಸ್ವಾಮಿಗಳ ಜೊತೆ ಗೌಪ್ಯ ಮಾತುಕತೆ ನಡೆದಿತ್ತು. ಅವರಿಬ್ಬರ ಭೇಟಿ ಬಳಿಕ ಸ್ವಾಮಿ ವಿಚಲಿತರಾಗಿದ್ದರು.
ಸ್ವಾಮಿಯನ್ನು ಹನಿಟ್ರ್ಯಾಪ್ ಮಾಡಲಾಗಿತ್ತು ಎಂಬ ವಿಷಯ ಹರಡಿತ್ತು. ಅದಕ್ಕೆ ಪುಷ್ಠಿ ನೀಡುವಂತೆ ಸ್ವಾಮೀಜಿ ಡೆತ್‍ನೋಟ್‍ನಲ್ಲೂ ತಿಳಿಸಿದ್ದರು. ಇದೀಗ ಅದೆಲ್ಲದಕ್ಕೂ ಪುಷ್ಠಿ ನೀಡುವ ಸಾಕ್ಷ್ಯ ದೊರೆತ್ತಿದ್ದು, ಸ್ವಾಮೀಜಿ, ಮಹಿಳೆ ಜೊತೆ ವೀಡಿಯೋ ಕಾಲ್‍ನಲ್ಲಿ ಮಾತುಕತೆ ನಡೆಸುತ್ತಿದ್ದ ವೀಡಿಯೋವೊಂದು ವೈರಲ್ ಆಗುತ್ತಿದೆ.
ಅಷ್ಟೇ ಅಲ್ಲದೇ ಕಳೆದ 6 ತಿಂಗಳಿಂದ ಆ ಮಹಿಳೆಯ ಸಂಪರ್ಕದಲ್ಲಿ ಸ್ವಾಮೀಜಿ ಇದ್ದರು. ಹಾಗೂ ಗೊತ್ತಿಲ್ಲದ ಮಹಿಳೆ ಜೊತೆ ಸ್ವಾಮಿಗಳು ಚಾಟಿಂಗ್ ಮಾಡುತ್ತಿದ್ದರು ಎಂಬ ವಿಷಯ ಬಯಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು