ರಾಜ್ಯದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಆಯ್ಕೆ ಆಗಿದ್ದಾರೆ.
30 ನೇ ನೂತನ ಸಿಎಂ ಆಗಲಿರುವ ಲಿಂಗಾಯತ ಸಮುದಾಯದವರೇ ಆದ ಬಸವರಾಜ್ ಬೊಮ್ಮಾಯಿ ಅವರಿಗೆ ಬಿಜೆಪಿ ಮಣೆ ಹಾಕಿದೆ. ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ನಿನ್ನೆ ರಾಜೀನಾಮೆ ನೀಡಿದ್ದರು. ಬಿಎಸ್ವೈ ನಂತರ ಯಾರು ಮುಂದಿನ ಸಾರಥಿ ಅನ್ನೋ ಪ್ರಶ್ನೆ ಎದ್ದಿತ್ತು.
ಪ್ರಮುಖವಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕ ಅರವಿಂದ್ ಬೆಲ್ಲದ್ ಸೇರಿದಂತೆ ಹಲವರು ಸಿಎಂ ರೇಸ್ನಲ್ಲಿ ಇದ್ದಾರೆ ಎನ್ನಲಾಗಿತ್ತು.
ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ಉದ್ದೇಶದಿಂದ ಬಿಜೆಪಿ ಹೈಕಮಾಂಡ್ನ ನಿಯೋಗ ರಾಜ್ಯಕ್ಕೆ ಆಗಮಿಸಿತ್ತು. ಇದೀಗ ಬಿಜೆಪಿ ಹೈಕಮಾಂಡ್ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದು, ಅಂತಿಮವಾಗಿ ಬಸವರಾಜ್ ಬೊಮ್ಮಾಯಿ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಮಾಡಿದೆ.
ಹೈಕಮಾಂಡ್ ಸೂಚನೆಯಂತೆ ಇಂದು ಸಂಜೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದಿಂದ ಬೊಮ್ಮಾಯಿ ಅವರನ್ನ ಸಿಎಂ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ನಾಳೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಎಸ್ ವೈ ಬೊಮ್ಮಯಿ ಹೆಸರನ್ನು ಪ್ರಸ್ತಾಪ ಮಾಡಿದರು. ಗೋವಿಂದ ಕಾರಜೋಳ ಅನುಮೋದನೆ ಮಾಡಿದರು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ