ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ

Newsnap Team
1 Min Read

ರಾಜ್ಯದ 30 ನೇ ಮುಖ್ಯಮಂತ್ರಿ ಯಾಗಿ ಬಸವರಾಜ ಬೊಮ್ಮಾಯಿ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋತ್ ಪ್ರಮಾಣವಚನ ಭೋದಿಸಿದರು.‌

ನಾಯಕರು ಸಾಕ್ಷಿ :

ಕನ್ಯಾ ಲಗ್ನದ ಶುಭ ಘಳಿಗೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿಯವರ ಪದಗ್ರಹಣ ಕಾರ್ಯಕ್ರಮಕ್ಕೆ ಕೇಂದ್ರದ ನಾಯಕರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ., ರಾಜ್ಯ ನಾಯಕರು ಹಾಗೂ ಕುಟುಂಬಸ್ಥರು ಸಾಕ್ಷಿಯಾಗಿದ್ದಾರೆ.

ಕೊನೆಘಳಿಗೆಯಲ್ಲಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಹೆಸರು ಸೂಚಿಸಿದ ಹಿನ್ನೆಲೆ ಬೊಮ್ಮಾಯಿ ಆಯ್ಕೆಗೆ ಪಕ್ಷದ ನಾಯಕರೂ ಒಪ್ಪಿಗೆ ಸೂಚಿಸಿದ್ದಾರೆ.

cmb

ಈ ಹಿನ್ನೆಲೆ ಇಂದು ಬೊಮ್ಮಾಯಿ ಅಧಿಕೃತವಾಗಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ರಾಜ್ಯ ಕಂಡ ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ-ಗಂಗಮ್ಮ ಬೊಮ್ಮಾಯಿ ದಂಪತಿಗೆ 28 ಜನವರಿ 1960 ರಂದು ಬಸವರಾಜ್ ಬೊಮ್ಮಾಯಿ ಜನಿಸಿರು.‌

  • ಹುಬ್ಬಳ್ಳಿಯ ರೋಟರಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಿಕ್ಷಣ ಪಡೆದು ಬಿವಿಬಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ಮೆಕ್ಯಾನಿಕಲ್ ಪದವೀಧರರಾಗಿದ್ದಾರೆ.
Share This Article
Leave a comment