December 26, 2024

Newsnap Kannada

The World at your finger tips!

horatti

Basavaraj horatti victory in Western Teachers field

ವಿಧಾನ ಪರಿಷತ್ ಅಧ್ಯಕ್ಷ , MLCಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

Spread the love

ಬಿಜೆಪಿ ಸೇರಲು ಮುಂದಾಗಿರುವ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ವಿಧಾನ ಪರಿಷತ್ ಅಧ್ಯಕ್ಷ ಹಾಗೂ M L C ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದರು, ಸುದ್ದಿಗೋಷ್ಠಿಯಲ್ಲಿ ತಮ್ಮ ರಾಜೀನಾಮೆಯನ್ನು ಪ್ರಕಟಿಸಿದ ನಂತರ ರಾಜೀನಾಮೆಪತ್ರವನ್ನು ಪರಿಷತ್ ಕಾರ್ಯದರ್ಶಿಯರಿಗೆ ಸಲ್ಲಿಸಿದರು.

ಈಗಾಗಲೇ ವಿಧಾನಪರಿಷತ್‍ನ ಎರಡು ಶಿಕ್ಷಕರು ಮತ್ತು ಎರಡು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ, ಮುಂಬರುವ ಚುನಾವಣೆಯಲ್ಲಿ ಹೊರಟ್ಟಿ ಅವರು ಬಿಜೆಪಿಯಿಂದ ಸ್ಪರ್ಧೆಗೆ ಇಳಿಯಲಿದ್ದಾರೆ.

ಬುಧವಾರ ಮಲ್ಲೇಶ್ವರಂದಲ್ಲಿರುವ ಜಗನ್ನಾಥ ಭವನದಲ್ಲಿ ಪಕ್ಷದ ಮುಖಂಡnರ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಹೊರಟ್ಟಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ಪಡೆದು ಕಮಲವನ್ನು ಮುಡಿಗೇರಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿ : ಜ್ಞಾನ ವ್ಯಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ – CRPF ನಿಂದ ರಕ್ಷಣೆಗೆ ಕೋರ್ಟ್ ಆದೇಶ

ಈವರೆಗೂ ಪಶ್ಚಿಮ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಸುತ್ತಿದ್ದ ಹೊರಟ್ಟಿ ಅವರು ಸತತ 7 ಬಾರಿ ಗೆದ್ದು ದಾಖಲೆಯನ್ನೇ ನಿರ್ಮಿಸಿದ್ದಾರೆ. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್‍ಗೆ ಗುಡ್‍ಬೈ ಹೇಳಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!