Main News

ಬಿಹಾರ್ ಚುನಾವಣಾ ಕದನ- ಎನ್‌ಡಿಎ ಸೀಟು ಹಂಚಿಕೆ ಅಂತ್ಯ

ಬಿಹಾರದಲ್ಲಿ ಚುಣಾವಣಾ ತಯಾರಿ ಬಹಳ ಜೋರಾಗಿದೆ. ಪ್ರತಿಕ್ಷಣಕ್ಕೂ ಆಸಕ್ತಿ ಮೂಡಿಸುತ್ತಿದೆ. ಈಗ ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆ ಪ್ರಕ್ರಿಯೆ ಮುಕ್ತಾಯವಾಗಿದೆ.

ಜೆಡಿಯು ಪಕ್ಷ 122 ಸೀಟುಗಳನ್ನು ಗಳಿಸಿಕೊಂಡಿದ್ದರೆ, ಬಿಜೆಪಿ ಪಕ್ಷವು 121 ಸೀಟುಗಳನ್ನು ಸೀಟುಗಳನ್ನು ಗಳಿಸಿಕೊಂಡಿದೆ. ಇತರೆ ಎನ್‌ಡಿಎ ಮೈತ್ರಿ ಪಕ್ಷಗಳಾದ ಹೆಚ್ಎಮ್‌ಗೆ ಜೆಡಿಯು 7 ಕ್ಷೇತ್ರಗಳನ್ನು ಹಾಗೂ ವಿಕಾಸ್‌ಶೀಲ್ ಇನ್ಸಾನ್ ಪಾರ್ಟಿಗೆ ಬಿಜೆಪಿ ಪಕ್ಷ ತನ್ನ ನಿರ್ಧಾರದಂತೆ ಕೆಲವು ಸೀಟುಗಳನ್ನು ಬಿಟ್ಟುಕೊಡಲಿದೆ.

‘ಚುಣಾವಣೆಯಲ್ಲಿ ಯಾವುದೇ ಪಕ್ಷ ಎಷ್ಟೇ ಮತಗಳನ್ನು ಪಡೆದರೂ ನಿತೀಶ್ ಅವರೇ ನಮ್ಮ ಮುಖ್ಯಮಂತ್ರಿ’ ಎಂದು ಉಪಮುಖ್ಯಮಂತ್ರಿ ಸುಶೀಲ್ ಸೀಟು ಹಂಚಿಕೆಯ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ನೀಡಿದರು.

ಈ ಹಿಂದೆ ಎನ್‌ಡಿಎ ಮೈತ್ರಿ ಕೂಟ ದಲ್ಲಿದ್ದ ಎಲ್‌ಜೆಪಿಯು ಜೆಡಿಯು ಪಕ್ಷದ ಮುಖಂಡ ನಿತೀಶ್ ಕುಮಾರ್ ಜೊತೆಗಿನ ಸಹಕಾರದ ಕೊರತೆಯಿಂದ ಎನ್‌ಡಿಎ ತೊರೆದು ಹೋಗಿತ್ತು. ಆದರೆ ಬಿಜೆಪಿಯೊಂದಿಗೆ ತನ್ನ ಬಾಂಧವ್ಯ ಮುಂದುವರೆಸುವದಾಗಿ ಎಲ್‌ಜೆಪಿ ಮುಖಂಡ ಚಿರಾಗ್ ಪಾಸ್ವಾನ್ ಹೇಳಿದ್ದರಾದರೂ ಅದನ್ನು ಬಿಜೆಪಿ ತಿರಸ್ಕರಿಸಿದೆ. *‘ಯಾವುದೇ ಕಾರಣಕ್ಕೂ ಹಿಂಬಾಗಿಲಿನ ಮೂಲಕ ಎಲ್‌ಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವದಿಲ್ಲ ಎಂದು ಹೇಳಿದೆ.

ನಿತೀಶ್ ಕುಮಾರ್ ಅವರ ನಾಯಕತ್ವದಲ್ಲೇ ಬಿಜೆಪಿ ಚುಣಾವಣೆ ಎದುರಿಸಲಿದೆ. ಅವರ ವಿರುದ್ಧ ನಿಲ್ಲುವವರು ಯಾರೂ ಎನ್‌ಡಿಎ ಮೈತ್ರಿಕೂಟದಲ್ಲಿರುವದಿಲ್ಲ’ ಎಂದಿದೆ.

ಬಿಜೆಪಿ. ಮುಂದುವರೆದ ಅದು ‘ಎಲ್‌ಜೆಪಿಯು ಎನ್‌ಡಿಎ ಮೈತ್ರಿಕೂಟದಿಂದ ಹೊರ ಹೋದ ಕಾರಣಕ್ಕಾಗಿ, ಪ್ರಧಾನಿ ಮೋದಿಯವರೊಂದಿಗಿನ ಎಲ್‌ಜೆಪಿ ಪಕ್ಷದ ನಾಯಕರ ಫೋಟೋಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳದಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಳ್ಳುತ್ತೇವೆ’ ಎಂದು ಹೇಳಿದೆ. ಅಲ್ಲದೇ ಎಲ್‌ಜೆಪಿಯು ಜೆಡಿಯು ಪಕ್ಷದ ಅಭ್ಯರ್ಥಿಗಳ ವಿರುದ್ದ ತನ್ನ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ನಿರ್ಧರಿಸಿದೆ.

ಬಿಹಾರದಲ್ಲಿ ಅಕ್ಟೋಬರ್‌ 28, ನವೆಂಬರ್‌ 3 ಹಾಗೂ 7ರಂದು ಮೂರು ಹಂತಗಳಲ್ಲಿ ಚುನಾವಣೆ
ನಡೆಯಲಿದೆ. ನವೆಂಬರ್‌ 10ರಂದು ಮತ ಎಣಿಕೆ ನಡೆಯಲಿದೆ.

ಈ ಹಿಂದೆ ಚುಣಾವಣೆಯಲ್ಲಿ ಚುಣಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದೇ ಇದ್ದಾಗ ಎನ್‌ಡಿಎ ಮತ್ರಿಯಿಂದ ಹೊರಬಿದ್ದಿದ್ದ ಜೆಡಿಯು ಮತ್ತು ಅದರ ಮುಖಂಡ ನಿತೀಶ್ ಕುಮಾರ್ ಕಾಂಗ್ರೆಸ್ ಜೊತೆ ಸೇರಿ ಮಹಾಘಟಬಂಧನ್ ರಚಿಸಿದ್ದರು. ಈಗ ಚುಣವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದೇ ಇದ್ದರೆ ಜೆಡಿಯು ನಡೆಯನ್ನು ಕಾಯ್ದು ನೋಡಬೇಕಿದೆ. ಪ್ರಸ್ತುತ ಎಲ್‌ಜೆಪಿ ಮೈತ್ರಿಯಿಂದ ಹೊರ ನಡೆದಿರುವುದು ಚುಣಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು.

Team Newsnap
Leave a Comment
Share
Published by
Team Newsnap

Recent Posts

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024

ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ

ಬೆಂಗಳೂರು:ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More

May 10, 2024

ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ

ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More

May 10, 2024