December 22, 2024

Newsnap Kannada

The World at your finger tips!

BBMP , commissioner , hospital

High fever: BBMP Chief Commissioner Tushar Girinath admitted to hospital ತೀವ್ರ ಜ್ವರದಿಂದ ಬಳಲಿಕೆ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆಸ್ಪತ್ರೆಗೆ ದಾಖಲು

ತೀವ್ರ ಜ್ವರದಿಂದ ಬಳಲಿಕೆ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆಸ್ಪತ್ರೆಗೆ ದಾಖಲು

Spread the love

ತೀವ್ರ ಜ್ವರದಿಂದ ಬಳಲುತ್ತಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬೆಂಗಳೂರಿನ ಕನ್ನಿಂಗ್‍ಹ್ಯಾಂ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತುಷಾರ್ ಗಿರಿನಾಥ್ ಸಣ್ಣ ಪ್ರಮಾಣದ ಜ್ವರದಿಂದ ಬಳಲುತ್ತಿದ್ದರು. ಇದರ ಜೊತೆಗೆ ಕಳೆದ ಶನಿವಾರದಿಂದ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಪರಿಶೀಲನೆಗೆ ಒಳಪಡಿಸಿದಾಗ ಯೂರಿನರಿ ಇನ್‍ಫೆಕ್ಷನ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಮನೆಯಲ್ಲೇ ಔಷಧ ಹಾಗೂ ಇಂಜೆಕ್ಷನ್ ನೀಡಲಾಗಿತ್ತು. ಆದರೂ ಜ್ವರ ಕ್ಷೀಣಿಸದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿಲುಮೆ ವೋಟರ್ ಐಡಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿ ನಡೆಯುತ್ತಿದೆ .ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ಅನೇಕರನ್ನು ಬಂಧಿಸಲಾಗಿದೆ.ಮುರುಘಾಮಠದಲ್ಲಿದ್ದ 22 ಅನಾಥ ಮಕ್ಕಳು ನಾಪತ್ತೆ ? ಸ್ವಾಮೀಜಿ ಮೇಲೆ ಮತ್ತೊಂದು ದೂರು ?

ಇದೇ ಸಮಯದಲ್ಲೇ ತುಷಾರ್ ಗಿರಿನಾಥ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಆತಂಕ ಹಾಗೂ ಒತ್ತಡದಿಂದಲೇ ಜ್ವರ ಕಾಣಿಸಿಕೊಂಡಿತೇ ಎಂಬ ಪ್ರಶ್ನೆಯೂ ಎದುರಾಗಿದೆ.

Copyright © All rights reserved Newsnap | Newsever by AF themes.
error: Content is protected !!