ಸುಪ್ರೀಂಕೋರ್ಟ್ ತನ್ನ ಮರು ಆದೇಶದಲ್ಲಿ ಹಾಲಿ ಓಬಿಸಿ ನೀತಿಯಡಿ ಬಿಬಿಎಂಪಿ ಚುನಾವಣೆ ನಡೆಸಬೇಕು. ಯಾವುದೇ ಕುಂಟುನೆಪ ಹೇಳಿ ಚುನಾವಣೆ ಮುಂದೂಡಬಾರದು ಎಂದು ಸ್ಪಷ್ಟವಾಗಿ ಹೇಳಿರುವುದು ಬಿಜೆಪಿಗೆ ನಂಗಲಾರದ ತುತ್ತಾಗಿದೆ.
ಈ ಹಿಂದಿನ ಆದೇಶ ಪ್ರಶ್ನಿಸಿ ಮಧ್ಯಪ್ರದೇಶ ಸರ್ಕಾರವು ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತನ್ನ ಹಿಂದಿನ ಆದೇಶ ಎತ್ತಿ ಹಿಡಿದಿದೆ. ನಿಖರ ಅಂಕಿ ಅಂಶಗಳ ಆಧಾರದ ಮೇಲೆ ಪರಿಶೀಲನೆ ನಡೆಸಬೇಕು. ಆ ಬಳಿಕವೇ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗದ ಜನರಿಗೆ ಶೇ. 27ರಷ್ಟು ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಇದನ್ನು ಓದಿ : ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿರೋಧ : ಹೈ ಕಮಾಂಡ್‌ಗೆ ವರದಿ – ಕೆ. ಬಿ. ಸಿ
ಹಾಲಿ ಮೀಸಲಾತಿ ಅನ್ವಯವೇ 1 ವಾರದಲ್ಲಿ ಅಧಿಸೂಚನೆ ಹೊರಡಿಸಬೇಕು ಎಂದು ಆದೇಶ ನೀಡಿದೆ. ಸುಪ್ರೀಂಕೋರ್ಟ್ ಮರು ಆದೇಶದಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು