ಬೆಂಗಳೂರು
ಅವಧಿಯಂತೆ ಬಿಬಿಎಂಪಿ ಚುನಾವಣೆ ನಡೆಸುವುದು ಸರ್ಕಾರದ ಉದ್ದೇಶವಾಗಿದೆ. ಇದಕ್ಕೆ ಬೇಕಾದ ತಯಾರಿಯನ್ನು ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಸೋಮವಾರ ಹೇಳಿದರು
ಬೊಮ್ಮನಹಳ್ಳಿ – ಬಿ.ಟಿ.ಎಂ ಲೇಔಟ್ ಸಂಪರ್ಕಿಸುವ ರಸ್ತೆ ಹಾಗೂ ಸೇತುವೆಯನ್ನು ಉದ್ಘಾಟಿಸಿ ನಂತರ ಸುದ್ದಿಗಾರರೊಂದಿಗ ಮಾತನಾಡಿ, ಬೊಮ್ಮನಹಳ್ಳಿ – ಬಿ.ಟಿ.ಎಂ ಲೇಔಟ್ ರಸ್ತೆ ನಿರ್ಮಾಣದ ಕಾರ್ಯ ಒಂದು ಹಂತ ಪೂರ್ಣ ಆಗಿದೆ. ಇನ್ನು ಕೆಲವು ಭಾಗದ ಕಾಮಗಾರಿ ಪೂರ್ಣಗೊಳ್ಳಬೇಕಾಗಿದೆ. ಬೆಂಗಳೂರು ನಗರ ನಿರೀಕ್ಷೆಗಿಂತಲೂ ಹೆಚ್ಚು ವೇಗವಾಗಿ ಬೆಳೆಯುತ್ತಿದೆ. ಅದಕ್ಕೆ ಸೌಕರ್ಯ ಕೊಡುವ ಆಲೋಚನೆ ಇದೆ ಎಂದರು.
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಈ ರಸ್ತೆ ಕೊಡುಗೆ ನೀಡಲಿದೆ. ಸುಮಾರು 15 ಕೋಟಿ ರೂಪಾಯಿ ವೆಚ್ಚದಲ್ಲಿ ಬೊಮ್ಮನಹಳ್ಳಿ – ಬಿ.ಟಿ.ಎಂ ಲೇಔಟ್ ಸಂಪರ್ಕಿಸುವ ರಸ್ತೆಯನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ