January 14, 2026

Newsnap Kannada

The World at your finger tips!

untitled 3 1

ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್

Spread the love

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದಲ್ಲಿರುವ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ & ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್ ಜಾರಿಯಾಗಿದೆ.

ಅಗ್ನಿ ಶಾಮಕ ದಳದಿಂದ ನಕ್ಷೆ, ಪ್ರಮಾಣ ಪತ್ರ ಹಾಗೂ ಎನ್‌ಒಸಿ ಪರವಾನಿಗೆ ಪಡೆಯದೇ, ಕಾನೂನು ಉಲ್ಲಂಘನೆ ಮಾಡಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಸಾಮಾಜಿಕ ಕಾರ್ಯಕರ್ತ ಹೆಚ್.ಎಂ ವೆಂಕಟೇಶ್ ಬಿಬಿಎಂಪಿಗೆ ದೂರು ನೀಡಿದ ಹಿನ್ನೆಲೆಯಲ್ಲಿ, ಶಾಂತಿನಗರ ಬಿಬಿಎಂಪಿ ಆರೋಗ್ಯ ವಿಭಾಗದ ಅಧಿಕಾರಿಗಳು ಈ ನೋಟಿಸ್‌ನ್ನು ಜಾರಿಗೊಳಿಸಿದ್ದಾರೆ.

ನೋಟಿಸ್ ವಿವರ:
ಈ ಬಾರ್ & ರೆಸ್ಟೋರೆಂಟ್‌ಗೆ ಈಗಾಗಲೇ ಒಂದು ಬಾರಿ ನೋಟಿಸ್ ನೀಡಲಾಗಿತ್ತು. ಆದರೂ ಪ್ರತಿಕ್ರಿಯೆ ನೀಡದ ಹಿನ್ನೆಲೆ ಮತ್ತೊಮ್ಮೆ ನೋಟಿಸ್ ನೀಡಿ, ಲಿಖಿತ ಸಮಜಾಯಿಷಿ ನೀಡುವಂತೆ ಬಿಬಿಎಂಪಿ ಒತ್ತಾಯಿಸಿದೆ. ಉತ್ತರ ನೀಡದೇ ಇದ್ದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.ಇದನ್ನು ಓದಿ –ಉದ್ಯೋಗಿಗಳ ಪಿಎಫ್ ವಂಚನೆ ಆರೋಪ: ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್

ಅಗ್ನಿ ಸುರಕ್ಷತಾ ನಿಯಮ ಉಲ್ಲಂಘನೆಗೆ ಕಠಿಣ ಕ್ರಮದ ಅಗತ್ಯ:
ಬೆಂಗಳೂರಿನಲ್ಲಿ ಅಗ್ನಿಸುರಕ್ಷತಾ ಕ್ರಮಗಳನ್ನು ನಿರ್ಲಕ್ಷಿಸುವ ಕಾರಣದಿಂದ ಹಲವಾರು ದುರಂತಗಳು ನಡೆದಿದೆ. ಇಂತಹ ಸಂದರ್ಭಗಳಲ್ಲಿ, ಕಾನೂನು ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

error: Content is protected !!