February 22, 2026

Newsnap Kannada

The World at your finger tips!

devendrappa

20 ಲಕ್ಷ ರು‌ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಬಿಬಿಎಂಪಿ‌ ಅಧಿಕಾರಿ ದೇವೇಂದ್ರಪ್ಪ

Spread the love

20 ಲಕ್ಷ ಲಂಚ ಸ್ವೀಕಾರಿಸುವ ವೇಳೆ ಬಿಬಿಎಂಪಿ ನಗರ ಯೋಜನಾ ಸಹಾಯಕ ನಿರ್ದೇಶಕ ದೇವೇಂದ್ರಪ್ಪ ಅವರನ್ನು ಬಂಧಿಸಿದ್ದಾರೆ.

ಕಾಮಗಾರಿ ಪೂರ್ಣಗೊಂಡ ಕಟ್ಟಡಕ್ಕೆ ಸಂಬಂಧಿಸಿದಂತೆ ಆಕ್ಯುಪೆನ್ಸಿ ಸರ್ಟಿಫಿಕೇಟ್ ನೀಡಲು ಆರೋಪಿ ಎಡಿಟಿಪಿ ದೇವೇಂದ್ರಪ್ಪ 40 ಲಕ್ಷ ಬೇಡಿಕೆ ಇಟ್ಟಿದ್ದರು.

ಈ ವೇಳೆ ವ್ಯಕ್ತಿಯೊಬ್ಬರು ಎಸಿಬಿಗೆ ದೂರು ನೀಡಿದ್ದರು. 20 ಲಕ್ಷ ಲಂಚ ಸ್ವೀಕಾರ ಮಾಡುವಾಗಲೇ ದೇವೇಂದ್ರಪ್ಪ ನವರನ್ನು ಬಂಧನ ಮಾಡಲಾಗಿದೆ.

ಬೆಂಗಳೂರಿನ ನಿವಾಸಿಯೊಬ್ಬರಿಂದ ಬೊಮ್ಮನಹಳ್ಳಿ ವಲಯದ ನಗರ ಯೋಜನೆ ಸಹಾಯಕ ನಿರ್ದೇಶಕರ ಎಸಿಬಿ ಅಧಿಕಾರಿಗಳು ಟ್ರ್ಯಾಪ್‌ ಕಾರ್ಯಾಚರಣೆ ಕೈಗೊಂಡಿದ್ದಾರೆ. ಕಾರ್ಯಾಚರಣೆಯ ವೇಳೆ ದೂರುದಾರರಿಂದ 20 ಲಕ್ಷ ಲಂಚದ ಹಣವನ್ನು ಪಡೆಯುತ್ತಿದ್ದಂತೆಯೇ ಎಸಿಬಿ ಅಧಿಕಾರಿಗಳು ದೇವೇಂದ್ರಪ್ಪರನ್ನು ಬಂಧಿಸಿ, ಲಂಚದ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.

error: Content is protected !!