ಖಾತೆ ಮಾಡಿಕೊಡಲು 4 ಲಕ್ಷ ರು ಲಂಚ ಪಡೆದ ಆರೋಪದ ಮೇಲೆ ಬೆಂಗಳೂರು ಪಶ್ಚಿಮ ವಿಭಾಗದ BBMP ಜಂಟಿ ಆಯುಕ್ತ ಶ್ರೀನಿವಾಸ್ ಹಾಗೂ ಪಿಎ ಉಮೇಶ್‌ನನ್ನು ಲೋಕಾಯುಕ್ತ ಪೋಲಿಸರು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಡಿವೈಎಸ್‌ಪಿ ಮಂಜಯ್ಯ, ಶಂಕರ್ ನಾರಾಯಣ್, ಪ್ರಶಾಂತ್ ಕುಮಾರ್ ಠಾಕೂರ್, ಬೆಂಗಳೂರು ಲೋಕಾಯುಕ್ತ ಎಸ್‌ಪಿ ಶ್ರೀನಾಥ್ ಜೋಶಿ ನೇತೃತ್ವದ ಲೋಕಾಯುಕ್ತ ಟೀಂ ಮಲ್ಲೇಶ್ವರಂನಲ್ಲಿರುವ ಪಶ್ಚಿಮ ವಿಭಾಗ ಬಿಬಿಎಂಪಿ ಕಚೇರಿ ಮೇಲೆ ದಾಳಿ ನಡೆಸಿ, ಬಿಬಿಎಂಪಿ ಜಂಟಿ ಆಯುಕ್ತ ಎಸ್.ಎಂ ಶ್ರೀನಿವಾಸ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಂಜುನಾಥ್ ಎಂಬವರ ದೂರಿನ ಮೇರೆಗೆ ಖಾತೆ ಬದಲಾವಣೆ ವಿಚಾರದಲ್ಲಿ 4 ಲಕ್ಷ ರು ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದರು. ಇದನ್ನು ಓದಿ : ನಟ ರಮೇಶ್ ಅರವಿಂದ್ ಸೇರಿ ಮೂವರು ಗಣ್ಯರಿಗೆ ರಾಣಿ ಚನ್ನಮ್ಮ ವಿ ವಿಯಿಂದ ಗೌರವ ಡಾಕ್ಟರೇಟ್
4 ಲಕ್ಷ ಹಣದ ಸಮೇತ ನಿಂತಿದ್ದ ಶ್ರೀನಿವಾಸ್ ಪಿಎ ಉಮೇಶ್ ಹಾಗೂ ಶ್ರೀನಿವಾಸ್‌ರನ್ನ ಬಂಧಿಸಿ, ಕಚೇರಿಯಲ್ಲೇ ವಿಚಾರಣೆ ನಡೆಸಿದೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
More Stories
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ