ಈ ಹಿಂದೆ ಬಿಬಿಎಂಪಿ ಅಧಿಕಾರಿ ಪ್ರಯಾಗ್ ರಾಜ್ ವಿರುದ್ಧ ಡ್ರೋನ್ ಪ್ರತಾಪ್ ಹಲ್ಲೆ ನಡೆಸಿದ್ದಾರೆಂದು ಹೇಳಿಕೆ ನೀಡಿದ್ದರು .ಪ್ರಯಾಗ್ ಅವರು 50 ಲಕ್ಷ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಇದೀಗ ಮತ್ತೊಬ್ಬ ಅಧಿಕಾರಿ 2 ಕೋಟಿ ರೂ.ಗೆ ಮೊಕದ್ದಮೆ ಹೂಡಿದ್ದಾರೆ ಎಂದು ಹೇಳಲಾಗುತ್ತಿದೆ .
ಡ್ರೋನ್ ಪ್ರತಾಪ್, ಬಿಗ್‌ಬಾಸ್ ಮನೆಯಲ್ಲಿ ಕೋವಿಡ್ ಸಂದರ್ಭದಲ್ಲಿ ತಾನು ಅನುಭವಿಸಿದ್ದ ಕ್ವಾರಂಟೈನ್ ಕಹಾನಿ ಬಗ್ಗೆ ಹೇಳಿಕೊಂಡು ಬಿಬಿಎಂಪಿ ನೋಡಲ್ ಅಧಿಕಾರಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು.
ಅವರ ಸಂಪೂರ್ಣ ಕ್ವಾರಂಟೈನ್ ಪ್ರಕ್ರಿಯೆಯ ಉಸ್ತುವಾರಿ ನೋಡಲ್ ಅಧಿಕಾರಿಯಾಗಿ ,ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಪ್ರತಾಪ್ ವಿರುದ್ಧ ನಾನೇ ಪ್ರಕರಣ ದಾಖಲಿಸಿ ಕಾನೂನು ಪ್ರಕಾರ ನಡೆದುಕೊಂಡಿದ್ದೆ. ಆದರೆ ಅವರು ಹೇಳುವುದರಲ್ಲಿ ಹುರುಳಿಲ್ಲ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಪ್ರತಾಪ್ ಮಹಾನ್ ಸುಳ್ಳುಗಾರ, ಆತನಿಗೆ ನಾನು ಯಾವುದೇ ಮಾನಸಿಕ ಹಿಂಸೆ ನೀಡಿಲ್ಲ.ಹೇಳುವ ಮಾತಿಗೆ ಸಾಕ್ಷ್ಯ ಒದಗಿಸಲಿ, ಆರೋಪ ನಿಜವಾಗಿದ್ದರೆ ನಾನು ರಾಜೀನಾಮೆ ಕೊಡುವೆನು ಎಂದು ಬಿಬಿಎಂಪಿ ನೋಡಲ್ ಅಧಿಕಾರಿ ಸ್ಪಷ್ಟ ಪಡಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು