January 28, 2026

Newsnap Kannada

The World at your finger tips!

B C Patil son in law

ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Spread the love

ದಾವಣಗೆರೆ: ಮಾಜಿ ಸಚಿವ ಬಿ.ಸಿ ಪಾಟೀಲ್ ಅವರ ಹಿರಯ ಮಗಳ ಗಂಡ (ಅಳಿಯ )ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆಯಲ್ಲಿ ಜರುಗಿದೆ.

ಮೃತರನ್ನು 43 ವರ್ಷದ ಕೆ.ಜಿ ಪ್ರತಾಪ್ ಕುಮಾರ್ ಎಂದು ಗುರುತಿಸಲಾಗಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಿಕೆರೆಯ ಶಿವಮೊಗ್ಗ-ಹರಿಹರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಾರು ನಿಲ್ಲಿಸಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

B C Patil

ವಿಷ ಸೇವಿಸಿದ್ದ ಕೆ.ಜಿ ಪ್ರತಾಪ್ ಕುಮಾರ್ ಅವರನ್ನು ಸ್ಥಳೀಯರು ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.ಬೆಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು

ಕೆಜಿ ಪ್ರತಾಪ್ ಕುಮಾರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆಜಿ ಪ್ರತಾಪ್ ಕುಮಾರ್ ಅವರು ಬಿ.ಸಿ ಪಾಟೀಲ್ ಹಿರಿಯ ಪುತ್ರಿ ಸೌಮ್ಯಾ ಅವರ ಪತಿ ಎಂದು ತಿಳಿದುಬಂದಿದೆ.

error: Content is protected !!