ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ, ಡಿಸಿಎಂ ಖಡಕ್ ವಾರ್ನಿಂಗ್

Team Newsnap
1 Min Read
Be careful not to disturb social harmony: CM, DCM warns police officers ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ, ಡಿಸಿಎಂ ಖಡಕ್ ವಾರ್ನಿಂಗ್

ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿದ್ದು ಅವರು, ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದ ಮುಖ್ಯಮಂತ್ರಿ, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯ ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ತಾಕೀತು ಮಾಡಿದರು

ಪೊಲೀಸ್‌ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್‌ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು, ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್‌ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್‌ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.ಯುಪಿಎಸ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ : ಟಾಪ್ 4 ಸ್ಥಾನ ಯುವತಿಯರ ಪಾಲು – ರಾಜ್ಯದ 25 ಮಂದಿ ಪಾಸ್

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಕೆ.ಜೆ. ಜಾರ್ಜ್‌, ಕೆ.ಹೆಚ್. ಮುನಿಯಪ್ಪ, ಬಿ.ಝಡ್. ಜಮೀರ್‌ ಅಹ್ಮದ್‌ ಖಾನ್‌, ಎಂ.ಪಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

Share This Article
Leave a comment