ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಸಾವಿಗೀಡಾದ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿ ವಿವರ:
ಮೃತ ವಿದ್ಯಾರ್ಥಿ ಮೈಸೂರು ಜಿಲ್ಲೆ ನಾಗನಹಳ್ಳಿ ಗ್ರಾಮದ ನಿವಾಸಿ ಎಸ್. ಶ್ರೇಯಸ್. ಈತ ಪಾಲಹಳ್ಳಿ ಸಮೀಪದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಬಿ.ಇ ಓದುತ್ತಿದ್ದ.
ಘಟನೆ ವಿವರ:
ಶ್ರೇಯಸ್ ಮೂವರು ಸ್ನೇಹಿತರೊಂದಿಗೆ ಬಲಮುರಿಗೆ ಈಜಲು ತೆರಳಿದ್ದ. ಈಜು ಬಾರದ ಸ್ನೇಹಿತರು ನದಿ ದಡದಲ್ಲಿಯೇ ಉಳಿದಿದ್ದು, ಈಜು ಬರುವ ಕಾರಣ ಶ್ರೇಯಸ್ ಏಕಾಂಗಿಯಾಗಿ ನದಿಗೆ ಇಳಿದಿದ್ದ. ಈ ವೇಳೆ, ನದಿಯ ಸುಳಿಗೆ ಸಿಲುಕಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ.ಇದನ್ನು ಓದಿ –ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
ಕಾನೂನು ಕ್ರಮ:
ಈ ಕುರಿತು ಕೆಆರ್‌ಎಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ದುರ್ಘಟನೆ ಸ್ಥಳೀಯರಲ್ಲಿ ದುಃಖ ಉಂಟುಮಾಡಿದ್ದು, ಕಾವೇರಿ ನದಿಯಲ್ಲಿ ಈಜಲು ಹೋಗುವವರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು