*ಬೆಂಗಳೂರು, ಕೇರಳ ಗಡಿಯಲ್ಲಿ 8ನೇ ತರಗತಿ ಮಾತ್ರ ಆರಂಭ
*ತರಗತಿಯಲ್ಲಿ ಹಾಜರಾತಿ ಕಡ್ಡಾಯವಲ್ಲ
ಬೆಂಗಳೂರು, ಕೇರಳ ಗಡಿಯಲ್ಲಿರುವ ಶಾಲೆಗಳನ್ನು ಹೊರತುಪಡಿಸಿ ಹೊರತುಪಡಿಸಿ ಫೆ.22 ರಿಂದ ರಾಜ್ಯಾದ್ಯಂತ 6 ರಿಂದ 8ನೇ ತರಗತಿಗಳು ಆರಂಭ ವಾಗಲಿವೆ.
ರಾಜ್ಯ ಸರ್ಕಾರದ ನಿರ್ಧಾರವನ್ನು ಶಾಲೆ ಆರಂಭದ ಬಗ್ಗೆ ಇಂದು ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, 6 ರಿಂದ 8ನೇ ತರಗತಿ ವಿದ್ಯಾಗಮ ಬದಲು ಪೂರ್ಣ ಪ್ರಮಾಣದ ಶಾಲೆಗಳನ್ನು ತೆರೆಯುತ್ತೇವೆ. ಶಾಲಾ ಪ್ರಾರಂಭದ ಬಗ್ಗೆ 5ನೇ ಸಭೆ ಇಂದು ನಡೆದಿದೆ ಎಂದರು.
ಸರ್ಕಾರದ ಪ್ರಮುಖ ನಿರ್ಧಾರ ಪ್ರಕಟ:
- ಬೆಂಗಳೂರು ನಗರ ಹಾಗೂ ಕೇರಳ ಗಡಿ ಭಾಗದಲ್ಲಿ 6 ಮತ್ತು 7ನೇ ತರಗತಿಗಳು ಇರುವುದಿಲ್ಲ.
- ಬೆಂಗಳೂರು ಮತ್ತು ಕೇರಳದಲ್ಲಿ ಕೊರೊನಾ ಪ್ರಕರಣಗಳು ಜಾಸ್ತಿ ಇರುವ ಕಾರಣ ಕೇವಲ 8ನೇ ತರಗತಿ ತೆರೆಯಲು ಅನುಮತಿ ನೀಡಲಾಗಿದೆ.
- ಕೇರಳ ಭಾಗದಿಂದ ಬರುವ ವಿದ್ಯಾರ್ಥಿಗಳು ಕೊರೊನಾ ಟೆಸ್ಟ್ ರಿಪೋರ್ಟ್ ಮಾಡುವುದು ಕಡ್ಡಾಯ. ಈ ಬಾರಿಯೂ ಶಾಲೆಗಳಿಗೆ ಹಾಜರಾತಿ ಕಡ್ಡಾಯ ಅಲ್ಲ.
- ಶಾಲೆಗಳಲ್ಲಿ ಕೊರೋನಾ ನಿಯಮ ಪಾಲನೆ ಆಗುವ ಸಂಬಂಧ ನಾಳೆ ಡಿಸಿಗಳ ಜೊತೆ ಸಭೆ
- 24 ಅಥವಾ 25 ಮತ್ತೆ ತಜ್ಞರ ಸಮಿತಿ ಜೊತೆ ಸಭೆ ಮಾಡುತ್ತೇವೆ. 1-5 ನೇ ತರಗತಿ ವಿದ್ಯಾಗಮ ಪ್ರಾರಂಭ ಮಾಡುವ ಕುರಿತಾಗಿ ಸಭೆಯಲ್ಲಿ ಅಂತಿಮ ನಿರ್ಧಾರ.
- ಸದ್ಯಕ್ಕೆ 1-5 ನೇ ತರಗತಿಗಳ ಪ್ರಾರಂಭ ಇಲ್ಲ ಮತ್ತು ವಿದ್ಯಾಗಮವೂ ಇಲ್ಲ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು