January 28, 2026

Newsnap Kannada

The World at your finger tips!

ಇಂದಿನಿಂದ ಹಾಸನಾಂಬೆ ದರ್ಶನ ಆರಂಭ : 7 ದಿನ ದರ್ಶನ ಭಾಗ್ಯ

Spread the love

ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ನೀಡುವ ಹಾಸನಾಂಬಾ ದೇವಿ ದರ್ಶನ ಇಂದಿನಿಂದ
ಭಕ್ತರಿಗೆ ಸಿಗಲಿದೆ. ಇಂದು ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆ ದೇವಾಲಯ ಬಾಗಿಲು ತೆರೆಯಲಿದೆ.

ಬಾಗಿಲು ತೆರೆಯುವ ಮೊದಲ ದಿನ ಮತ್ತು ಬಾಗಿಲು ಹಾಕುವ ಕೊನೆಯ ದಿನ ಭಕ್ತರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಉಳಿದ ಏಳು ದಿನಗಳು ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶವಿದೆ.

ಬೆಳಗ್ಗೆ 6 ರಿಂದ ಮಧ್ಯಾಹ್ನ 1 ಹಾಗೂ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.

ಕೊರೊನಾ ಕಾರಣ ಎರಡು ಲಸಿಕೆ ಪಡೆದಿದ್ದವರಿಗೆ ಮಾತ್ರ ದರ್ಶನಕ್ಕೆ ಅವಕಾಶವಿರುತ್ತದೆ. ವ್ಯಾಕ್ಸಿನ್ ಹಾಕಿಸಿಕೊಂಡ ಸರ್ಟಿಫಿಕೇಟ್ ಅಥವಾ ಮೆಸೇಜ್ ತೋರಿಸಬೇಕು.

error: Content is protected !!