ನಾಳೆಯಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ : ನಾಲ್ಕು ಹೊಸ ಮಸೂದೆಗಳ ಮಂಡನೆ ಸಾಧ್ಯತೆ

Team Newsnap
1 Min Read

ನಾಳೆಯಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ನಡೆಯಲಿದೆ.15 ನೇ ವಿಧಾನಸಭೇಯ 14 ನೇ ಅಧಿವೇಶನ ಇದಾಗಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಕಲಾಪ ಆರಂಭವಾಗಲಿದೆ.

ಬೆಳಗಾವಿ ಚಳಿಗಾಲದ ಅಧಿವೇಶನವು ಡಿಸೆಂಬರ್ 19 ರಿಂದ 30 ರವರೆಗೆ ನಡೆಯಲಿದ್ದು, ಎಸ್ ಸಿ, ಎಸ್ ಟಿ ಮೀಸಲಾತಿ, ಪಂಚಮಸಾಲಿಗಳಿಗೆ ಮೀಸಲಾತಿ, 40 ಪರ್ಸೆಂಟ್ ಸರ್ಕಾರ, ಗಡಿ ವಿವಾದದ ಬಗ್ಗೆ ಪ್ರತಿಪಕ್ಷಗಳು ಪ್ರಸ್ತಾಪಿಸಲು ಸಿದ್ಧತೆ ಮಾಡಿಕೊಂಡಿವೆ.

ಅಧಿವೇಶನದಲ್ಲಿ ನಾಲ್ಕು ಹೊಸ ವಿಧೇಯಕ ಮತ್ತು ಎರಡು ಈಗಾಗಲೇ ಮಂಡಿಸಿರುವ ವಿಧೇಯಕ ಸೇರಿದಂತೆ ಈವರೆಗೆ ಆರು ವಿಧೇಯಕಗಳು ಮಂಡನೆಯಾಗುವುದು ಖಚಿತವಾಗಿದೆ. ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದಂತೆ ಖಾಸಗಿ ವಿಧೇಯಕ ಮಂಡನೆಯಾಗುವ ಸಾಧ್ಯತೆಯೂ ಇದೆ.

ಈ ಹಿನ್ನೆಲೆಯಲ್ಲಿ ಡಿ.30ರವರೆಗೆ ಸುವರ್ಣಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಹೇಳಿದ್ದಾರೆ.ನಗರದಲ್ಲಿ ಯಾವುದೇ ಪ್ರತಿಭಟನೆ, ಗುಂಪು ಕಟ್ಟಿಕೊಂಡು ಓಡಾಡಲು ನಿಷೇಧಿಸಲಾಗಿದೆ.

10 ದಿನಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನಕ್ಕೆ ನಗರದಲ್ಲಿ ಭರದ ಸಿದ್ಧತೆಗಳು ನಡೆಯುತ್ತಿವೆ. ಶಾಸಕರು, ಪರಿಷತ್ ಸದಸ್ಯರು, ಅಧಿಕಾರಿಗಳು ಸೇರಿದಂತೆ ಅಧಿವೇಶನ ಸಂದರ್ಭದಲ್ಲಿ ಬೆಳಗಾವಿ ನಗರಕ್ಕೆ 10 ಸಾವಿರ ಮಂದಿ ಆಗಮಿಸಲಿದ್ದಾರೆ. ಆಧಿವೇಶನದಲ್ಲಿ ಮಹತ್ವ ವಿಷಯದ ಕುರಿತು ಚರ್ಚೆ ಮಾಡಲಾಗಿದೆ.

Share This Article
Leave a comment