ಕರ್ನಾಟಕದಿಂದ ಅಯೋಧ್ಯೆ ರಾಮಮಂದಿರಕ್ಕೆ ಘಂಟೆ, ಪೂಜಾ ಸಾಮಾಗ್ರಿ ಸಮರ್ಪಣೆ

Team Newsnap
1 Min Read

ಬೆಂಗಳೂರು: ಅಯೋಧ್ಯೆಯ ರಾಮಮಂದಿರ ಜನವರಿ 22ರಂದು ಲೋಕಾರ್ಪಣೆಯಾಗುತ್ತಿದ್ದು , ಬೆಂಗಳೂರಿನಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದ ದೇಗುಲಕ್ಕೆ ಅರ್ಪಿಸಲಾಗುತ್ತಿರುವ ಘಂಟೆಗಳು ಹಾಗೂ ಪೂಜಾ ಸಾಮಗ್ರಿಗಳಿಗೆ ವಿವಿಧ ಮಠಾಧೀಶರ ಅಧ್ವರ್ಯದಲ್ಲಿ ಪೂಜೆ ನೇರವೇರಿಸಲಾಗಿದೆ .

ನಿನ್ನೆ ಬನಶಂಕರಿ ಒಂದನೇ ಹಂತದಲ್ಲಿರುವ ಬ್ರಹ್ಮ ಚೈತನ್ಯ ಮಂದಿರದಲ್ಲಿ ಅಯೋಧ್ಯೆಯಲ್ಲಿ ಲೋಕಾರ್ಪಣೆಯಾಗುತ್ತಿರುವ ಶ್ರೀರಾಮ ಮಂದಿರದ ದೇಗುಲಕ್ಕೆ ಘಂಟೆಗಳು ಹಾಗೂ ಪೂಜಾ ಸಾಮಗ್ರಿಗಳನ್ನು ಅರ್ಪಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಡುಪಿ ಪೇಜಾವರ ಮಠದ ಪೀಠಾಧಿಪತಿ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ರಾಮಮಂದಿರ ದೇವಸ್ಥಾನ ಸಹಸ್ರ ವರ್ಷಗಳವರೆಗೆ ಉಳಿಯಬೇಕಿದೆ.

ಈ ಹಿನ್ನೆಲೆಯಲ್ಲಿ ಘಂಟಾ ನಾದ ಪರಿಕ್ರಮ ಬೆಂಗಳೂರಿನಿಂದ ಹೊರಡುತ್ತಿರುವುದು ವಿಶೇಷವಾಗಿದೆ ಎಂದು ತಿಳಿಸಿದ್ಧಾರೆ.

38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳು ,5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳನ್ನು ಸಮರ್ಪಣೆ ಮಾಡಲಾಗಿದೆ. ಇಂದು ಅಯೋಧ್ಯೆಗೆ ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಕೊಂಡೊಯ್ಯಲಿದ್ದಾರೆ.

ಈ ಘಂಟೆಗಳನ್ನು ತಮಿಳುನಾಡಿನ ನಾಮಕ್ಕಲ್‌ನಲ್ಲಿ ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ.ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಾಮನಗರದ ಬಳಿ ದರೋಡೆ

ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Share This Article
Leave a comment