ವಿಶ್ವ ಪರಂಪರೆ ಪಟ್ಟಿʼಗೆ ಸೇರಿದ ಕರ್ನಾಟಕದ ʻಬೇಲೂರು, ಹಳೇಬೀಡು, ಸೋಮನಾಥಪುರʼ ದೇವಾಲಯಗಳು

Team Newsnap
1 Min Read

UNESCO ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ.

ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ.

ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ.

ಈ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ ಪೋಸ್ಟ್‌ನಲ್ಲಿ, “ಭಾರತಕ್ಕೆ ಹೆಚ್ಚು ಹೆಮ್ಮೆ!

ಹೊಯ್ಸಳರ ಭವ್ಯವಾದ ಪವಿತ್ರ ಮೇಳಗಳನ್ನು UNESCO ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿದೆ. ಹೊಯ್ಸಳ ದೇವಾಲಯಗಳ ಕಾಲಾತೀತ ಸೌಂದರ್ಯ ಮತ್ತು ಸಂಕೀರ್ಣ ವಿವರಗಳು ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಮತ್ತು ನಮ್ಮ ಪೂರ್ವಜರ ಅಸಾಧಾರಣ ಕರಕುಶಲತೆಗೆ ಸಾಕ್ಷಿಯಾಗಿದೆ.” ಎಂದಿದ್ದಾರೆ.

Share This Article
Leave a comment