ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್‌ನ 114 ಕೋಟಿ ರೂ. ಆಸ್ತಿ ಜಪ್ತಿ

Team Newsnap
2 Min Read
Bengaluru: 114 crores of Guru Raghavendra Bank. Forfeiture of property ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್‌ನ 114 ಕೋಟಿ ರೂ. ಆಸ್ತಿ ಜಪ್ತಿ

ಬೆಂಗಳೂರಿನ ಗುರು ರಾಘವೇಂದ್ರ ಬ್ಯಾಂಕ್‌ನ ಬಹುಕೋಟಿ ರು ವಂಚನೆ ಪ್ರಕರಣದ ಸಂಬಂಧ 114 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ.

ಬ್ಯಾಂಕ್‌ನ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿರುವ ಆರೋಪದ ಕುರಿತು ಇಡಿ ತನಿಖೆ ಕೈಗೊಂಡಿತ್ತು.

ಮಂಗಳವಾರ ಜಾರಿ ನಿರ್ದೇಶನಾಲಯ (ಇಡಿ) 2002ರ ಅಕ್ರಮ ಹಣ ವರ್ಗಾವಣೆ ಕಾಯ್ದೆ (ಪಿಎಂಎಲ್‌ಎ) ಅಡಿ ಗುರು ರಾಘವೇಂದ್ರ ಬ್ಯಾಂಕ್‌ನ 114 ಕೋಟಿ ಆಸ್ತಿಯನ್ನು ಜಪ್ತಿ ಮಾಡಿದೆ.

ಬ್ಯಾಂಕ್‌ನಲ್ಲಿ ನಡೆದ ಸಾರ್ವಜನಿಕ ಹಣದ ದುರುಪಯೋಗದ ಹಿನ್ನಲೆಯಲ್ಲಿ ಈ ಕ್ರಮ ಜರುಗಿಸಲಾಗಿದೆ.

ಇಡಿ ಬ್ಯಾಂಕ್‌ಗೆ ಸಂಬಂಧಿಸಿದ ಒಟ್ಟು 21 ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿವೆ. ಖಾಲಿ ಭೂಮಿ, ಮನೆಗಳು, ವಾಣಿಜ್ಯ ಸಂಕೀರ್ಣ, ಕೈಗಾರಿಕಾ ಕಟ್ಟಡ ಸೇರಿದಂತೆ 3.15 ಕೋಟಿ ರೂ. ಚರಾಸ್ತಿಯನ್ನು ಸಹ ಜಪ್ತಿ ಮಾಡಲಾಗಿದೆ. ಈ ಎಲ್ಲಾ ಆಸ್ತಿಗಳ ಒಟ್ಟು ಮೌಲ್ಯ 114 ಕೋಟಿ ರೂ.ಗಳು.

ಭಾರೀ ಸಂಚಲನ ಮೂಡಿಸಿದ ಹಗರಣ ಐಎಂಎ ಹಗರಣದ ಮಾದರಿಯಲ್ಲಿ ಬೆಂಗಳೂರಿನಲ್ಲಿ ಗುರು ರಾಘವೇಂದ್ರ ಬ್ಯಾಂಕ್‌ನ ಹಗರಣ ಭಾರೀ ಸಂಚಲನ ಮೂಡಿಸಿತ್ತು. ಈ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ಸಹ ಬಿಜೆಪಿ ಸರ್ಕಾರ ನಿರ್ಧರಿಸಿದೆ.

ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಶಾಸಕರು ಸಿಬಿಐ ತನಿಖೆಗ ವಹಿಸಲು ಒಪ್ಪಿಗೆ ನೀಡಿದ್ದಾರೆ.

ವಿಧಾನಸಭೆ ಕಲಾಪದಲ್ಲಿಯೂ ಗುರು ರಾಘವೇಂದ್ರ ಬ್ಯಾಂಕ್, ಶ್ರೀ ವಸಿಷ್ಠ ಪತ್ತಿನ ಸೌಹಾರ್ದ ಸಹಕಾರ ಸಂಘದಲ್ಲಿ ನಡೆದ ಅವ್ಯವಹಾರದ ಬಗ್ಗೆ ಚರ್ಚೆ ನಡೆದಿತ್ತು. ಬ್ಯಾಂಕಿನ ಆಸ್ತಿ ಜಪ್ತಿ ಮಾಡಿದ್ದರೂ ಸಹ ಠೇವಣಿದಾರರಿಗೆ ಹಣ ಶೀಘ್ರವೇ ಹಿಂದಿರುಗಿಸಲಾಗುತ್ತದೆ ಎಂದು ಆಶ್ವಾಸನೆ ನೀಡಲಾಗಿತ್ತು. ಆದರೆ ಯಾವುದೇ ಕ್ರಮ ಆಗಿಲ್ಲ ಎಂದು ಕಾಂಗ್ರೆಸ್‌ ನಾಯಕ, ವಿಧಾನ ಪರಿಷತ್ ಸದಸ್ಯ ಯು. ಬಿ. ವೆಂಕಟೇಶ್‌ ವಿಚಾರ ಪ್ರಸ್ತಾಪಿಸಿದ್ದರು.

ಈ ಕುರಿತು ಉತ್ತರ ನೀಡಿದ್ದ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, “ವ್ಯಕ್ತಿಯೇ ಇಲ್ಲದಿದ್ದರೂ ಆತನ ಹೆಸರಿನಲ್ಲಿ ಬ್ಯಾಂಕ್‌ನಲ್ಲಿ ಠೇವಣಿ ಇಡಲಾಗಿದೆ. 1,544.43 ಕೋಟಿ ಸಾಲದ ಪೈಕಿ 1576 ಕೋಟಿ ಸಾಲದ ಖಾತೆಗಳಿಗೆ ದಾಖಲೆಯೇ ಇಲ್ಲವಾಗಿದೆ. ಸಾಲ ಮಂಜೂರಾತಿ ಪ್ರಾಧಿಕಾರ ಸಾಲ ಮಂಜೂರು ಮಾಡದಿದ್ದರೂ ಸಾಲದ ಹಣ ಬಿಡುಗಡೆ ಮಾಡಲಾಗಿದೆ” ಎಂದು ವಿಧಾನ ಪರಿಷತ್ ಕಲಾಪದಲ್ಲಿ ಉತ್ತರ ನೀಡಿದ್ದರು.

“24 ಸಾಲಗಾರರಿಗೆ 892.85 ಕೋಟಿ ಸಾಲ ಮಂಜೂರು ಮಾಡಲಾಗಿದೆ. ಠೇವಣಿ ಇಲ್ಲದಿದ್ದರೂ ಇದೆ ಎಂದು ತೋರಿಸಿ 409.11 ಕೋಟಿ ಸಾಲ ನೀಡಿರುವ ಗಂಭೀರ ಲೋಪಗಳು ಪತ್ತೆಯಾಗಿವೆ. ಈ ಎಲ್ಲಾ ಅವ್ಯವಹಾರ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್, ರಿಸರ್ವ್ ಬ್ಯಾಂಕ್‌ನ ನಿರ್ದೇಶನದಂತೆ ನಾವು ಕ್ರಮಗಳನ್ನು ಕೈಗೊಳ್ಳುತ್ತೇವೆ” ಎಂದು ಸಚಿವರು ವಿವರಣೆ ನೀಡಿದ್ದರು.

ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ಕೈಗೊಂಡಿದ್ದ ಇಡಿ ಬ್ಯಾಂಕ್ ಅಧ್ಯಕ್ಷ ಕೆ. ರಾಮಕೃಷ್ಣ ಬಂಧಿಸಿತ್ತು. 892.43 ಕೋಟಿ ರೂ. ಸಾಲ ಯಾರ ಬಳಿ ಇದೆ, ಯಾರಿಗೆ ವರ್ಗಾವಣೆಯಾಗಿದೆ? ಎಂದು ವಿಚಾರಣೆ ನಡೆಸಿತ್ತು. ರಾಮಕೃಷ್ಣ ಬ್ಯಾಂಕ್‌ ಅಧ್ಯಕ್ಷರಾಗಿದ್ದಾಗ 2876 ಮಂದಿಗೆ ಸಾಲ ನೀಡಲಾಗಿತ್ತು. ಈ ಸಾಲದ ಮೊತ್ತ 1544.43 ಕೋಟಿಯಾಗಿದೆ. ಇದರಲ್ಲಿ 892.85 ಕೋಟಿ ರೂ. ನಕಲಿ ದಾಖಲೆಗಳನ್ನು ನೀಡಿ ಸಾಲ ಪಡೆಯಲಾಗಿತ್ತು.ಇದನ್ನು ಓದಿ –ಗಾಂಜಾ ಕೇಸ್‌. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್‌ ಲೇಡಿ

Share This Article
Leave a comment