ಬೆಂಗಳೂರಿನಲ್ಲಿ ರೌಡಿ ಶೀಟರ್ ಒಬ್ಬ, ಮಹಿಳಾ ಮುಖ್ಯಪೇದೆಗೆ ಡ್ರ್ಯಾಗರ್ ನಿಂದ ಇರಿದ ಘಟನೆ ಜರುಗಿದೆ.
ಬೆಂಗಳೂರಿನ ಹೆಚ್ ಎಎಲ್ ಬಳಿಯ ಜ್ಯೋತಿ ನಗರದಲ್ಲಿ ಕಳೆದ ರೌಡಿ ಶೀಟರ್ ಶೇಕ್ ಶರೀಫ್ ಆಲಿಯಾಸ್ ಶರೀಫ್ (25) ಎಂಬಾತ HAL ಠಾಣೆಯ ಮಹಿಳಾ ಹೆಡ್ ಕಾನ್ ಸ್ಟೇಬಲ್ ವಿನುತಾ ಎಂಬುವರಿಗೆ ಚಾಕುವಿನಿಂದ ಇರಿದಿದ್ದಾನೆ.ಇದನ್ನು ಓದಿ –RSSನ ಕಚೇರಿ ಕೇಶವಕೃಪಾಗೆ ಸಿಎಂ ಬೊಮ್ಮಾಯಿ ರಾತ್ರೋರಾತ್ರಿ ಭೇಟಿ
ಚಾಕುವಿನಿಂದ ಇರಿದ ಬಳಿಕ ರೌಡಿ ಶೀಟರ್ ಸ್ಥಳದಿಂದ ಪರಾರಿಯಾಗುತ್ತಿದ್ದನು .
ಸಾರ್ವಜನಿಕರ ಸಹಾಯದಿಂದ ಬಂಧಿಸಲಾಗಿದೆ. ಕೊಲೆ ಪ್ರಕರಣದ ಒಂದರಲ್ಲಿ ಜಾಮೀನು ಬಿಡುಗಡೆಯಾಗಿದ್ದ.
ಈ ರೌಡಿ ಮತ್ತೊಂದು ಕೊಲೆ ಮಾಡಲು ಸಂಚು ರೂಪಿಸುವ ಸೂಚನೆ ಸಿಕ್ಕ ನಂತರ ಆತನನ್ನು ಬಂಧಿಸಿ ಕರೆತಲು ಹೋಗಿದ್ದ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಆಗ ಹೆಡ್ ಕಾನ್ಸ್ ಸ್ಟೇಬಲ್ ಮೇಲೆ ಹಲ್ಲೆ ಮಾಡಿ ಡ್ರ್ಯಾಗನ್ ನಿಂದ ಇರಿದಿದ್ದಾನೆ.
ಮಹಿಳಾ ಹೆಡ್ ಕಾನ್ ಸ್ಟೇಬಲ್ ವಿನುತಾರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಹೆಚ್ ಎಎಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
- ಮುಡಾ ಹಗರಣ: ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ತನಿಖಾ ವರದಿ ಆಧರಿಸಿ ಸರ್ಕಾರದ ಕ್ರಮ
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ