ಸೆ.11ಕ್ಕೆ ಬೆಂಗಳೂರು ಬಂದ್ : ಸರ್ಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟ

Team Newsnap
1 Min Read

ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸರ್ಕಾರಕ್ಕೆ ಹಲವು ಬೇಡಿಕೆ ಈಡೇರಿಸುವಂತೆ ನೀಡಿದ್ದ ಗಡುವು ಅಂತ್ಯಗೊಂಡಿದ್ದು, ಪ್ರತಿಭಟನೆಯ ಮುಂದುವರಿದ ಭಾಗವಾಗಿ ‘ಬೆಂಗಳೂರು ಬಂದ್‌’ಗೆ ನಿರ್ಧರಿಸಿವೆ.

32 ಸಂಘಟನೆಗಳಿರುವ ರಾಜ್ಯದ ಖಾಸಗಿ ಸಾರಿಗೆ ಒಕ್ಕೂಟ ಸುದ್ದಿಗೋಷ್ಠಿ ನಡೆಸಿ ಬೆಂಗಳೂರು ಬಂದ್ ನಡೆಸುವುದಾಗಿ ತಿಳಿಸಿದೆ.

ಶಕ್ತಿ ಯೋಜನೆ ಜಾರಿಯಾಗಿರುವ ಬಳಿಕ ಖಾಸಗಿ ಸಾರಿಗೆ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಈ ಸಮಸ್ಯೆಗೆ ಪರಿಹಾರ ನೀಡುವಂತೆ ಖಾಸಗಿ ಸಾರಿಗೆ ಒಕ್ಕೂಟ ಸರ್ಕಾರಕ್ಕೆ 10 ದಿನಗಳ ಗಡುವು ನೀಡಿತ್ತು.

ಸಮಸ್ಯೆಗೆ ಸರ್ಕಾರ ಯಾವುದೇ ಸ್ಪಂದನೆ ನೀಡದೇ ಹೋಗಿರುವ ಹಿನ್ನೆಲೆ ಸೆಪ್ಟೆಂಬರ್ 11 ರಂದು ಬೆಂಗಳೂರು ಬಂದ್‌ಗೆ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದೆ.

ಸೆಪ್ಟೆಂಬರ್ 11 ಸೋಮವಾರ ಆಟೋ, ಟ್ಯಾಕ್ಸಿ, ಏರ್ ಪೋರ್ಟ್ ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್, ಕಾರ್ಪೋರೇಟ್ ವಾಹನಗಳು, ಸ್ಕೂಲ್ ಬಸ್ ಚಾಲಕರು, ಫ್ಯಾಕ್ಟರಿ ವಾಹನ, ಸ್ಟೇಜ್ ಗ್ಯಾರೇಜ್ ಸಂಚಾರ ಸಂಪೂರ್ಣ ಬಂದ್ ಇರಲಿದೆ.

ಖಾಸಗಿ ಸಾರಿಗೆ ಬೇಡಿಕೆಗಳೇನು?
* ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಧನ
* ಬೈಕ್, ರ್ಯಾಪಿಡ್ ಟ್ಯಾಕ್ಸಿಗಳ ಸಂಪೂರ್ಣ ನಿಷೇಧ
* ಅಸಂಘಟಿತ ವಾಣಿಜ್ಯ ಚಾಲಕರ ಮತ್ತು ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ
* ಸೌಲಭ್ಯ ಯೋಜನೆಯಡಿ ಆಟೋ, ಟ್ಯಾಕ್ಸಿ ಚಾಲಕರಿಗೆ ಕಡಿಮೆ ಬಡ್ಡಿ ಸಾಲ
* ವೈಟ್ ಬೋರ್ಡ್ ವಾಹನದಲ್ಲಿ ಬಾಡಿಗೆ ಮಾಡುವುದಕ್ಕೆ ಬ್ರೇಕ್ ಹಾಕಬೇಕು
* ಚಾಲಕರ ಮಕ್ಕಳಿಗೆ ವಿದ್ಯಾರ್ಥಿ ವೇತನ
* ಓಲಾ, ಊಬರ್ ಆ್ಯಪ್ ಆಧಾರಿತ ಸೇವೆಗಳ ನಿರ್ಬಂಧ
* ಖಾಸಗಿ ಬಸ್‌ಗಳಿಗೂ ಶಕ್ತಿ ಯೋಜನೆ ಅಡಿ ಸೇವೆಗೆ ಅವಕಾಶ
* ಖಾಸಗಿ ವಾಹನಗಳನ್ನು ಕಿ.ಮೀ ಆಧಾರದಲ್ಲಿ ಸರ್ಕಾರ ಬಾಡಿಗೆಗೆ ಪಡೆಯುವುದು
* ನಿಯಮ ಬಾಹಿರವಾಗಿ ವಾಹನ ವಶಕ್ಕೆ ಪಡೆಯುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ

Share This Article
Leave a comment