ಸೆ.11ಕ್ಕೆ ಬೆಂಗಳೂರು ಬಂದ್ – ಏನಿರುತ್ತೆ ? ಏನು ಇರಲ್ಲ?

Team Newsnap
2 Min Read

ಬೆಂಗಳೂರು: ಸೆ. 11 ರಂದು ಬೆಂಗಳೂರು ಬಂದ್‍ಗೆ ಖಾಸಗಿ ವಾಹನ ಚಾಲಕರ ಒಕ್ಕೂಟ ಸಕಲ ಸಿದ್ಧತೆ ಮಾಡಿಕೊಂಡಿದೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಯಶಸ್ಸು ಸರ್ಕಾರಕ್ಕೆ ಅನುಕೂಲವಾದರೆ ಖಾಸಗಿ ವಾಹನಗಳಾದ ಆಟೋ, ಓಲಾ, ಉಬರ್ ಸೇರಿದಂತೆ ಖಾಸಗಿ ಬಸ್‍ಗಳಿಗೆ ದೊಡ್ಡ ಪೆಟ್ಟು ಕೊಟ್ಟಿದೆ. ಮಹಿಳೆಯರು ಅವುಗಳಲ್ಲಿ ಸಂಚರಿಸುವುದನ್ನೇ ಬಿಟ್ಟಿದ್ದಾರೆ. ಇದು ಖಾಸಗಿ ವಾಹನ ಚಾಲಕರ ಹಾಗೂ ಮಾಲೀಕರ ಆತಂಕಕ್ಕೆ ಕಾರಣವಾಗಿದೆ.

ಈ ವಿಚಾರವಾಗಿ ಪರಿಹಾರ ಕೊಡುವಂತೆ ಸರ್ಕಾರಕ್ಕೆ ಒತ್ತಡ ಕೂಡ ತರಲಾಗಿತ್ತು. ಆದರೆ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಬೆಂಗಳೂರು ಬಂದ್‍ಗೆ ಕರೆ ನೀಡಲಾಗಿದೆ.

ಭಾನುವಾರ ರಾತ್ರಿ 12 ಗಂಟೆಯಿಂದಲೇ ಖಾಸಗಿ ವಾಹನ ಸಂಚಾರ ಬಂದ್ ಆಗಲಿದೆ ಸೋಮವಾರ ರಾತ್ರಿ 12 ಗಂಟೆವರೆಗೆ ಬಂದ್ ಮಾಡಲು ಒಕ್ಕೂಟ ನಿರ್ಧಾರ ಮಾಡಿದೆ.

ಬಂದ್ ಹೇಗಿರುತ್ತೆ?

32 ಸಂಘಟನೆಗಳ 7 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚಾರ ನಿಲ್ಲಿಸಲಿವೆ. ಏರ್‌ಪೋರ್ಟ್ ಟ್ಯಾಕ್ಸಿ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತದೆ. ಓಲಾ, ಊಬರ್ ಆಟೋ ಟ್ಯಾಕ್ಸಿ ಬಂದ್ ಆಗಲಿದೆ.

ಕಾರ್ಪೋರೇಟ್ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿರುವ ಬಸ್‍ಗಳು ಕೂಡ ಬಂದ್‍ಗೆ ಬೆಂಬಲ ನೀಡಿ ಸಂಚಾರ ಸ್ಥಗಿತಗೊಳಿಸಲಿವೆ.

ಖಾಸಗಿ ವಾಹನಗಳ ಮೂಲಕ ಮಕ್ಕಳನ್ನು ಶಾಲೆಗೆ ಕಳುಹಿಸುವವರಿಗೂ ಬಂದ್ ಬಿಸಿ ತಟ್ಟಲಿದೆ. ಗೂಡ್ಸ್ ವಾಹನಗಳು ಬಂದ್ ಆಗುವ ಸಾಧ್ಯತೆ ಇದೆ. ನಗರದಲ್ಲಿ 3 ಲಕ್ಷ ಆಟೋ 1.5 ಲಕ್ಷ ಟ್ಯಾಕ್ಸಿ, 20 ಸಾವಿರ ಗೂಡ್ಸ್ ವಾಹನಗಳು, 5 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 80 ಸಾವಿರ ಸಿಟಿ ಟ್ಯಾಕ್ಸಿ ಮತ್ತು ಕಾರ್ಪೋರೇಟ್ ಕಂಪನಿಯ ಬಸ್‍ಗಳು ಸೇವೆಯಿಂದ ಹೊರಗುಳಿಯಲಿವೆ.

ಒಟ್ಟು 5 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚಾರವನ್ನು ನಿಲ್ಲಿಸಲಿವೆ. ಅಲ್ಲದೇ ಹೋಟೆಲ್ ಮಾಲೀಕರ ಸಂಘದ ಬಳಿಯೂ ಬಂದ್‍ಗೆ ಬೆಂಬಲ ಸೂಚಿಸುವಂತೆ ಮನವಿ ಮಾಡಲಾಗಿದ್ದು ಹೋಟೆಲ್‍ಗಳು ಬಂದ್ ಆಗುವ ಸಾಧ್ಯತೆ ಇದೆ. ಇದರೊಂದಿಗೆ ವರ್ತಕರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು, ಬೀದಿ ಬದಿ ವ್ಯಾಪಾರಿಗಳೊಂದಿಗೆ ಬಂದ್‍ಗೆ ಬೆಂಬಲಿಸುವಂತೆ ಕೇಳಿಕೊಳ್ಳಲಾಗಿದೆ.ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

ಪ್ರತಿಭಟನಾಕಾರರು ನಗರದೊಳಗೆ ಬೃಹತ್ ಮೆರವಣಿಗೆಗೆ ತಯಾರಿ ಮಾಡಿಕೊಂಡಿದ್ದು, ಮೆರವಣಿಗೆ ಬಳಿಕ ಫ್ರೀಡಂ ಪಾರ್ಕ್‍ನಲ್ಲಿ ಶಕ್ತಿ ಪ್ರದರ್ಶನ ತೋರಿಸಲಿದ್ದಾರೆ.

Share This Article
Leave a comment