ಬೆಂಗಳೂರು: ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಸಂಭವಿಸಿದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಈ ಅವಘಡದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ.
ಈ ದುರಂತದಲ್ಲಿ 8 ಮಂದಿ ಮೃತಪಟ್ಟಿದ್ದಾರೆ, ಮತ್ತು 8 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು, ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮೃತದೇಹಗಳನ್ನು ಸಂಬಂಧಿಸಿದ ಸ್ಥಳಗಳಿಗೆ ಕಳುಹಿಸಲಾಗುತ್ತಿದೆ, ಮತ್ತು ಕುಸಿತದ ಕಾರಣ ಕಳಪೆ ಕಾಮಗಾರಿಯೆಂದು ತಿಳಿದುಬಂದಿದೆ. ಈ ಸಂಬಂಧ ಎಕ್ಸಿಕ್ಯೂಟಿವ್ ಇಂಜಿನಿಯರ್‌ಗಳಿಗೆ ನೋಟಿಸ್ ನೀಡಲಾಗಿದೆ.ಸಿದ್ದರಾಮಯ್ಯ ಸೊಸೆ ಹೆಸರಿನಲ್ಲಿ ಪಬ್: ಎಚ್. ವಿಶ್ವನಾಥ್ ಗಂಭೀರ ಆರೋಪ
ಅ. 22ರ ಸಂಜೆ ನಡೆದ ಈ ಅವಘಡದಲ್ಲಿ, 8 ಜನರು ಮೃತಪಟ್ಟಿದ್ದು, 2 ಮಂದಿ ಇನ್ನೂ ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ರಕ್ಷಣಾ ಕಾರ್ಯ ಮುಂದುವರೆದಿದ್ದು, ಈವರೆಗೆ ಒಟ್ಟು 13 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು