ಬೆಂಗಳೂರು: ನಗರದ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಬುಸಾಬ್‌ಪಾಳ್ಯದಲ್ಲಿ ನಡೆದ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಟ್ಟಡದ ಮಾಲೀಕ ಭೂವನ್ ರೆಡ್ಡಿಯನ್ನು ಬಂಧಿಸಿದ್ದಾರೆ.
ಬಂಧಿತ ಭೂವನ್ ರೆಡ್ಡಿ ಈ ಪ್ರಕರಣದ ಮೊದಲನೇ ಆರೋಪಿ ಮುನಿರಾಜಿರೆಡ್ಡಿಯ ಮಗನಾಗಿದ್ದು, ಅವರ ಮೇಲೆ BNSSS, BBMP, RERA ಸೇರಿದಂತೆ ಹಲವು ಕಾಯ್ದೆಗಳಡಿಯಲ್ಲಿ ಎಫ್ಐಆರ್ ದಾಖಲಾಗಿದೆ.ಇದನ್ನು ಓದಿ –ಮುಂದಿನ 6 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಕಟ್ಟಡ ಕುಸಿತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಮತ್ತೊಬ್ಬನ ಮೃತದೇಹ ಪತ್ತೆಯಾಗಿರುವುದರಿಂದ ಸಾವಿನ ಸಂಖ್ಯೆ 8ಕ್ಕೆ ಏರಿದೆ. ಪೊಲೀಸರು ಬಿಎನ್‌ಎಸ್‌ಎಸ್ 105, 125(A), 125(B), 270, 3(5), ಬಿಬಿಎಂಪಿ ಕಾಯ್ದೆ 326, 327, 328 ಹಾಗೂ RERA (u/s3) ಅಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ