ಕರ್ನಾಟಕ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಒಂದೇ ದಿನ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಬಂಧನವಾಗಿದೆ
ಪಿಎಸ್‌ಐ ಅಕ್ರಮ ಕೇಸ್ನಲ್ಲಿ ಎಡಿಜಿಪಿ ಅಮೃತ್ ಪೌಲ್ ಬಂಧನವಾದರೆ , ಇತ್ತ ತನ್ನ ಮ್ಯಾನೇಜರ್ ಮೂಲಕ 5 ಲಕ್ಷ ಲಂಚ ಪಡೆದ ಆರೋಪದಡಿ ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ಅವರನ್ನು ACB ಪೋಲಿಸರು ಬಂಧಿಸಿದ್ದಾರೆ .ಇದನ್ನು ಓದಿ –PSI ಅಕ್ರಮ ನೇಮಕಾತಿ ಹಗರಣ : ADGP ಅಮೃತ್ ಪೌಲ್ ಬಂಧನ
ಡಿಸಿ ಮಂಜುನಾಥ್ ಮಹೇಶ್ ಮೂಲಕ 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರುದಾರ ಅಜಂ ಪಾಷ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ ಈ ಹಿಂದೆಯೇ ಎಸಿಬಿ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಮೇಲೆ ದಾಳಿ ನಡೆಸಿದ್ದರು. ಆಗ ಮಹೇಶ್ ದೂರುದಾರನಿಂದ 5 ಲಕ್ಷ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದರು.
ಅಮೃತ್ ಪೌಲ್ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅವ್ಯವಹಾರದಲ್ಲಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯ ಲಭ್ಯವಾಗಿತ್ತು. ಹೀಗಾಗಿ ಇವರೊಂದಿಗೆ ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಎಡಿಜಿಪಿ ಅಮೃತ್ ಪೌಲ್ ಕೂಡ ಈ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಇವರ ಅವಧಿಯಲ್ಲೇ ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆದಿತ್ತು.
ಮಂಜುನಾಥ್ ಬಗ್ಗೆ ಒಂದಷ್ಟು ಮಾಹಿತಿ :
ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಜಮೀನು ವ್ಯಾಜ್ಯ ಇತ್ಯರ್ಥಪಡಿಸಲು 5 ಲಕ್ಷ ಪಡೆದ ಪ್ರಕರಣದಲ್ಲಿ ಬಂಧಿತರಾದ ಇವರು ಸದ್ಯ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಎಂಡಿ ಆಗಿದ್ದಾರೆ.ಎಸಿಬಿ ಅಧಿಕಾರಿಗಳು ಮಂಜುನಾಥ್‍ರನ್ನು ಇಂದು ವಿಚಾರಣೆಗೆ ಕರೆದು ಸಾಕ್ಷ್ಯಾಧಾರ ಪಕ್ಕಾ ಆದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಮೂಲತಃ ರಾಜ್ಯ ಲೆಕ್ಕ ಪತ್ರ ಇಲಾಖೆ ಹಿರಿಯ ಅಧಿಕಾರಿಯಾಗಿದ್ದ ಮಂಜುನಾಥ್ ಅವರು ನಾನ್ ಕೆಎಎಸ್ ವಿಭಾಗದಲ್ಲಿ ಐಎಎಸ್ ಪದೋನ್ನತಿ ಪಡೆದವರಾಗಿದ್ದಾರೆ.
ಚಿಕ್ಕಬಳ್ಳಾಪುರ ಸಿಇಒ ಆಗಿದ್ದರು ನಂತರ ಕೋಲಾರ ಡಿಸಿ ಆಗಿದ್ದರು. ಬಳಿಕ ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದರು. ಕಳೆದ 1 ವರ್ಷದಿಂದ ಬೆಂಗಳೂರು ಡಿಸಿಯಾಗಿದ್ದರು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ