crime

ಐದು ಲಕ್ಷ ರು ಲಂಚ ಪಡೆದ ಆರೋಪ : ಬೆಂಗಳೂರು ನಗರ ಡಿಸಿ ಮಂಜುನಾಥ್ ಬಂಧನ

ಕರ್ನಾಟಕ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಒಂದೇ ದಿನ ಹಿರಿಯ ಐಎಎಸ್​​ ಮತ್ತು ಐಪಿಎಸ್​ ಅಧಿಕಾರಿಗಳ ಬಂಧನವಾಗಿದೆ

ಪಿಎಸ್​ಐ ಅಕ್ರಮ ಕೇಸ್​​ನಲ್ಲಿ ಎಡಿಜಿಪಿ ಅಮೃತ್​ ಪೌಲ್​ ಬಂಧನವಾದರೆ , ಇತ್ತ ತನ್ನ ಮ್ಯಾನೇಜರ್​ ಮೂಲಕ ​5 ಲಕ್ಷ ಲಂಚ ಪಡೆದ ಆರೋಪದಡಿ ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ಅವರನ್ನು ACB ಪೋಲಿಸರು ಬಂಧಿಸಿದ್ದಾರೆ .ಇದನ್ನು ಓದಿ –PSI ಅಕ್ರಮ ನೇಮಕಾತಿ ಹಗರಣ : ADGP ಅಮೃತ್ ಪೌಲ್ ಬಂಧನ

ಡಿಸಿ ಮಂಜುನಾಥ್ ಮಹೇಶ್​​​ ಮೂಲಕ 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರುದಾರ ಅಜಂ ಪಾಷ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇರೆಗೆ ಈ ಹಿಂದೆಯೇ ಎಸಿಬಿ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಮೇಲೆ ದಾಳಿ ನಡೆಸಿದ್ದರು. ಆಗ ಮಹೇಶ್​​ ದೂರುದಾರನಿಂದ 5 ಲಕ್ಷ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದರು.

ಅಮೃತ್​ ಪೌಲ್​​ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅವ್ಯವಹಾರದಲ್ಲಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯ ಲಭ್ಯವಾಗಿತ್ತು. ಹೀಗಾಗಿ ಇವರೊಂದಿಗೆ ಪೊಲೀಸ್‌ ನೇಮಕಾತಿ ವಿಭಾಗದ ಡಿವೈಎಸ್ಪಿ ಸೇರಿದಂತೆ ಹಲವು ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಎಡಿಜಿಪಿ ಅಮೃತ್‌ ಪೌಲ್‌ ಕೂಡ ಈ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಇವರ ಅವಧಿಯಲ್ಲೇ ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆದಿತ್ತು.

ಮಂಜುನಾಥ್ ಬಗ್ಗೆ ಒಂದಷ್ಟು ಮಾಹಿತಿ :

ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಜಮೀನು ವ್ಯಾಜ್ಯ ಇತ್ಯರ್ಥಪಡಿಸಲು 5 ಲಕ್ಷ ಪಡೆದ ಪ್ರಕರಣದಲ್ಲಿ ಬಂಧಿತರಾದ ಇವರು ಸದ್ಯ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಎಂಡಿ ಆಗಿದ್ದಾರೆ.ಎಸಿಬಿ ಅಧಿಕಾರಿಗಳು ಮಂಜುನಾಥ್‍ರನ್ನು ಇಂದು ವಿಚಾರಣೆಗೆ ಕರೆದು ಸಾಕ್ಷ್ಯಾಧಾರ ಪಕ್ಕಾ ಆದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಮೂಲತಃ ರಾಜ್ಯ ಲೆಕ್ಕ ಪತ್ರ ಇಲಾಖೆ ಹಿರಿಯ ಅಧಿಕಾರಿಯಾಗಿದ್ದ ಮಂಜುನಾಥ್ ಅವರು ನಾನ್ ಕೆಎಎಸ್ ವಿಭಾಗದಲ್ಲಿ ಐಎಎಸ್ ಪದೋನ್ನತಿ ಪಡೆದವರಾಗಿದ್ದಾರೆ.

ಚಿಕ್ಕಬಳ್ಳಾಪುರ ಸಿಇಒ ಆಗಿದ್ದರು ನಂತರ ಕೋಲಾರ ಡಿಸಿ ಆಗಿದ್ದರು. ಬಳಿಕ ಬಿಬಿಎಂಪಿ ವಿಶೇಷ ಆಯುಕ್ತರಾಗಿದ್ದರು. ಕಳೆದ 1 ವರ್ಷದಿಂದ ಬೆಂಗಳೂರು ಡಿಸಿಯಾಗಿದ್ದರು.

Team Newsnap
Leave a Comment

Recent Posts

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024