November 16, 2024

Newsnap Kannada

The World at your finger tips!

chaluva na

ಬೆಂಗಳೂರು- ಜಲಸೂರು ರಸ್ತೆ ಕಾಮಗಾರಿ 6 ತಿಂಗಳಲ್ಲಿ ಪೂರ್ಣಗೊಳಿಸಿ : ಎನ್ ಚಲುವರಾಯಸ್ವಾಮಿ ಸೂಚನೆ

Spread the love

ಮಂಡ್ಯ :

ಮಾಗಡಿ -ಸೋಮವಾರಪೇಟೆ ಜಲಸೂರು ಹೆದ್ದಾರಿಯ ಮಂಡ್ಯ ಜಿಲ್ಲಾ ವ್ಯಾಪ್ತಿಯ ರಸ್ತೆ ಕಾಮಗಾರಿಯನ್ನು ಮುಂದಿನ 6 ತಿಂಗಳೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರು ಹಾಗೂ‌ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ .ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.

ನಾಗಮಂಗಲ ಕ್ಷೇತ್ರದ ಕೌಡ್ಲೆ ಗೇಟ್ ನಿಂದ ನಾಗಮಂಗಲ ಬೋಗಾದಿ ಮಾರ್ಗವಾಗಿ ಕೆ.ಆರ್ ಪೇಟೆ ವರಗೆ ರಸ್ತೆ ಕಾಮಗಾರಿ ಪರಿಶೀಲಿಸಿದ ಸಚಿವರು ಕೆ.ಶಿಫ್ ಇಂಜಿನಿಯರ್ ಗಳಿಗೆ ಹಲವು ನಿರ್ದೇಶನಗಳನ್ನು ನೀಡಿದರು.

ಇದೇ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು 2018 ರಲ್ಲಿ ರಸ್ತೆ ಕಾಮಗಾರಿಗೆ ಅನುಮೋದನೆ ದೊರಕಿದ್ದು, 2020 ರಲ್ಲಿ ಕಾಮಗಾರಿ ಪ್ರಾರಂಭವಾಗಿರದೆ.3 ವರ್ಷಗಳಿಂದ ಯಾವುದೇ ರೀತಿಯ ಸಮಸ್ಯೆ ಇಲ್ಲದ ಪ್ರದೇಶದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

ಕೋವಿಡ್ ಸಂದರ್ಭ, ಅಧಿಕಾರಿಗಳ ಬದಲಾವಣೆ, ಭೂ ಸ್ವಾಧೀನ, ಅರಣ್ಯ ಇಲಾಖೆಗೆ ಸೇರಿದ ಸ್ಥಳದಿಂದ ಕೆಲವು ಭಾಗಗಳಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ. ಸಮಸ್ಯೆಗಳ ಬಗ್ಗೆ ಚರ್ಚಿಸಲು ಇಂದು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಹೆದ್ದಾರಿ ಕಾಮಗಾರಿಗೆ 63 ಎಕರೆ ಅರಣ್ಯ ಭೂಮಿ ಬಳಕೆಯಾಗಲಿದ್ದು ಫಾರೆಸ್ಟ್ ಕ್ಲಿಯರೆನ್ಸ್ ಗಾಗಿ ಕೇಂದ್ರಕ್ಕೆ ಪ್ರಸ್ರಾವನೆ ಕಳಿಸಲಾಗಿದೆ ಈ ಜಮೀನಿನ ಬದಲಿಗೆ 126 ಎಕರೆ ಬದಲಿ ಸರ್ಕಾರಿ ಭೂಮಿಯನ್ನು ಅರಣ್ಯ ಇಲಾಖೆಗೆ ಬಿಟ್ಟು ಕೊಡಲು ಈ ಗಾಗಲೇ ಜಾಗ ಗುರುತಿಸಲಾಗಿದೆ.ಕೇಂದ್ರದ ಅನುಮೋದನೆ ಬಾಕಿ ಇದೆ.
ಇದಲ್ಲದೆ ಜಿಲ್ಲೆಯ 8 ಕಡೆ ತಾಂತ್ರಿಕ ಸಮಸ್ಯೆ ಗಳಿಂದ ಕೆಲಸ ವಿಳಂಬವಾಗಿದ್ದು‌ ಆದಷ್ಟು ಶೀಘ್ರ ಬಗೆಹರಿಯಲಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

ನಾಗಮಂಗಲ ಬಳಿ ಜವಳಿ ಪಾರ್ಕ್ ಗೆ 6 ಎಕರೆ ಹಾಗೂ ಗಾರ್ಮೆಂಟ್ಸ್ ಉದ್ದಿಮೆಗೆ 4 ಎಕರೆ ಜಾಗ ಗುರುತಿಸಲು ಸೂಚಿಸಲಾಗಿದೆ ಈಗಾಗಲೇ ಅಧಿಕಾರಿಗಳು ಕ್ರಮವಹಿಸಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.

ರಸ್ತೆಗೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲಾ ವ್ಯಾಪ್ತಿಯ ಸಮಸ್ಯೆಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿ ಸಭೆ ನಡೆಸಿ ಪರಿಹರಿಸಲಾಗುವುದು‌ ಎಂದು ಸಚಿವರು ‌ಹೇಳಿದರು.

ಪರಿಶೀಲನೆ ವೇಳೆ ಜಿಲ್ಲಾಧಿಕಾರಿ ಡಾ: ಕುಮಾರ, ಉಪವಿಭಾಗಾಧಿಕಾರಿ ನಂದೀಶ್, ಕೆ.ಶಿಪ್ ಚೀಫ್ ಇಂಜಿನಿಯರ್ ಶಿವಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!