ಕೆರೆಗೆ ಹಾರಿ ಯುವಕ, ಯುವತಿ ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಂಕಿಕೆರೆ ಗ್ರಾಮದ ಬಳಿಯ ಕೆರೆಯಲ್ಲಿ ನಡೆದಿದೆ.
ಬೆಂಗಳೂರು ವಾಸಿ ನಾಗರತ್ನ (21) ವರ್ಷ ಚರಣ್ (22) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳಾಗಿದ್ದಾರೆ.
ನಿನ್ನೆ ರಾತ್ರಿ ಪಲ್ಸರ್ ಬೈಕ್ ನಲ್ಲಿ ಬಂದಿದ್ದ ಯುವಕ-ಯುವತಿ ಕೆರೆಯ ಪಕ್ಕದಲ್ಲಿ ಬೈಕ್ ನಿಲ್ಲಿಸಿ ಕಾಣೆಯಾಗಿದ್ದರು.
ಇಂದು ಇಬ್ಬರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇಬ್ಬರ ಮೃತದೇಹಗಳನ್ನ ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಹೊರ ತೆಗೆದಿದ್ದಾರೆ.
ಘಟನೆ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಕಳೆದ ಎರಡು ವರ್ಷಗಳ ಹಿಂದೆಯೇ ಮೃತ ನಾಗರತ್ನ ವಿವಾಹ ಪ್ರಸನ್ನ ಕುಮಾರ್ ಎಂಬಾತನೊಂದಿಗೆ ನಡೆದಿತ್ತು ಎನ್ನಲಾಗಿದೆ.
ಕೊಡಗಿನಲ್ಲಿ ಸಿದ್ದುಗೆ ಬಿಜೆಪಿ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ
ಇನ್ನು ಕಳೆದ ಎರಡು ದಿನಗಳ ಹಿಂದೆ ನಾಗರತ್ನ ನಾಪತ್ತೆಯಾಗಿದ್ದ ಬಗ್ಗೆ ಗಂಡ ಪ್ರಸನ್ನ ಕುಮಾರ್ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
More Stories
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ