ಬಿಎಂಆರ್‌ಸಿಎಲ್ (Bengaluru Metro Rail Corporation Limited) ಹಿಂದಿನ ಹಲವು ಸಂದರ್ಭಗಳಲ್ಲಿ ಮೆಟ್ರೋ ದರ ಏರಿಕೆ ಕುರಿತು ಪ್ರಸ್ತಾಪ ಮಾಡಿತ್ತು, ಆದರೆ ಕಳೆದ ಕೆಲ ವರ್ಷಗಳಿಂದ ಯಾವುದೇ ಏರಿಕೆಯಾಗಿರಲಿಲ್ಲ. ಈ ಬಾರಿ, ಆದಾಗ್ಯೂ, ದರ ಏರಿಕೆಗೆ ಮುಂದಾಗಿದ್ದಾರೆ.
ಮೆಟ್ರೋ ದರ ನಿಗದಿ ಸಮಿತಿಯು 15% ರಿಂದ 20% ರಷ್ಟು ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆಯ ಬಗ್ಗೆ ಮಾಹಿತಿ ನೀಡಿದೆ.
ಬಿಎಂಆರ್‌ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶವಂತ್ ಚೌಹಾನ್ ಈ ಕುರಿತು ವಿವರಗಳನ್ನು ಹಂಚಿಕೊಂಡಿದ್ದು, “ರಾಜ್ಯ ಮತ್ತು ಕೇಂದ್ರದ ಹಿರಿಯ ಅಧಿಕಾರಿಗಳು, ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಆಗಿದೆ.
ಇದು ಸ್ವತಂತ್ರ ಸಮಿತಿ ಆಗಿದ್ದು, ಈಗಾಗಲೇ ಒಂದು ಸಭೆ ನಡೆದಿದೆ. ಸಮಿತಿ ಶೀಘ್ರದಲ್ಲೇ ವರದಿ ನೀಡಲಿದೆ, ಅದರ ಆಧಾರದ ಮೇಲೆ ದರ ಏರಿಕೆಯಾಗಲಿದೆ,” ಎಂದು ಹೇಳಿದ್ದಾರೆ.
ಸಮಿತಿಯು ಸಾರ್ವಜನಿಕ ಅಭಿಪ್ರಾಯವನ್ನು ಕೂಡ ಸಂಗ್ರಹಿಸಲು ಯೋಜಿಸಲಾಗಿದೆ. “ನಮ್ಮ ಖರ್ಚು ವೆಚ್ಚಗಳನ್ನು ಪರಿಗಣಿಸಿಕೊಂಡು ದರ ಏರಿಕೆ ಮಾಡಲಿದ್ದೇವೆ. ಇನ್ನೂ ಮೂರು ತಿಂಗಳ ಒಳಗೆ ದರ ಏರಿಕೆಯಾಗುವ ಸಾಧ್ಯತೆ ಇದೆ,” ಎಂದು ಅವರು ತಿಳಿಸಿದ್ದಾರೆ.ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಹರ್ಷಿಕಾ ಪೂಣಚ್ಚ
ಅ. 21 ರೊಳಗೆ ಪ್ರಯಾಣಿಕರು ತಮ್ಮ ಅಭಿಪ್ರಾಯಗಳನ್ನು ಬಿಎಂಆರ್‌ಸಿಎಲ್‌ಗೆ ತಿಳಿಸಲು ಅವಕಾಶ ನೀಡಲಾಗಿದೆ, ಮತ್ತು ಸಲಹೆಗಳನ್ನು ffc@bmrc.co.in ಎಂಬ ಇಮೇಲ್ ಮೂಲಕ ಕಳುಹಿಸಲು ಸೂಚಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು