ನಾಳೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಇಲ್ಲ -ಸಂಸದ ಪ್ರತಾಪ್ ಸಿಂಹ

Team Newsnap
1 Min Read

ಬೆಂಗಳೂರು :

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಬಿಟ್ಟ ಕ್ರಮ ಖಂಡಿಸಿ ಉದ್ದೇಶಿತ ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ ಬದಲಿಗೆ ಮಂಡ್ಯದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ನಾಳೆ ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿತ್ತು. ಇದೀಗ ಟ್ವೀಟ್ ಮೂಲಕ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ನಾಳೆ ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡುವುದಿಲ್ಲ ಮತ್ತು ಮಾಡುವುದು ತಪ್ಪಾಗುತ್ತದೆ. ಮಂಡ್ಯದ ಸಂಜಯ್ ಸರ್ಕಲ್ ನಲ್ಲಿ ಪ್ರತಿಭಟನೆ ಇದೆ. ಧನ್ಯವಾದಗಳು ಎಂದು ಟ್ವೀಟ್ ಮೂಲಕ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.

ಕಾವೇರಿ ಕೊಳ್ಳದದ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್ ನಿಂದ ಯಾವುದೇ ಸ್ಪಷ್ಟ ಆದೇಶವಿಲ್ಲದಿದ್ದರೂ ರಾಜ್ಯ ಸರಕಾರ ತಮಿಳುನಾಡಿಗೆ ನೀರು ಬಿಡುವ ಮೂಲಕ ಮಂಡ್ಯ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.

Share This Article
Leave a comment