ಬೆಂಗಳೂರು ಟ್ರಾಫಿಕ್ ಸಮಸ್ಯೆ : ರಾಜ್ಯ ಸರ್ಕಾರದಿಂದ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ಚಿಂತನೆ

Team Newsnap
1 Min Read

ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರವು ಬ್ರಾಂಡ್ ಬೆಂಗಳೂರು ಯೋಜನೆಯಡಿ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಹೆಚ್ಚು ಟ್ರಾಫಿಕ್ ಇರುವ ರಸ್ತೆಗಳನ್ನು ಸುರಂಗ ಮಾರ್ಗದಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದ್ದು, ಇದಕ್ಕಾಗಿ 50 ಸಾವಿರ ಕೋಟಿ ರೂ.ವೆಚ್ಚ ಮಾಡಲು ನಿರ್ಧರಿಸಿದೆ.

50 ಕೋಟಿ ರೂ. ವೆಚ್ಚದಲ್ಲಿ 6 ಕಡೆ ಸುರಂಗ ಮಾರ್ಗ ಮಾಡಲು ಮುಂದಾಗಿದೆ. ಈ ಸುರಂಗ ಮಾರ್ಗ ನಿರ್ಮಾಣಕ್ಕೆ ಕನಿಷ್ಠ 5 ವರ್ಷ ಸಮಯ ಬೇಕಾಗಲಿದೆ. ಈ ನಡುವೆ ಸುರಂಗ ಮಾರ್ಗ ನಿರ್ಮಾಣದ ಹೊಣೆ BBMP ಗಾ? ಅಥವಾ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕಾ? (BDA) ಅನ್ನೋ ಪ್ರಶ್ನೆ ಎದ್ದಿದೆ. 2 ಹಂತದಲ್ಲಿ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.

ಟ್ರಾಫಿಕ್ ಕಿರಿಕಿರಿ ತಪ್ಪಿಸಲು ರಸ್ತೆ ಅಗಲೀಕರಣ, ಎಲಿವೇಟೆಡ್ ರಸ್ತೆ, 20 ಪ್ರಮುಖ ಜಕ್ಷನ್ ರಸ್ತೆಗಳ ಬಗ್ಗೆ ಗಮನ, ನೈಸ್ ರಸ್ತೆಯನ್ನು ವರ್ತುಲ ರಸ್ತೆ ಆಗಿ ಮಾರ್ಪಾಡು, ಪಾದಚಾರಿ ಮಾರ್ಗ ಸುಧಾರಣೆ, ನಗರದಲ್ಲಿ ಸುರಂಗ ರಸ್ತೆಗಳ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ.

ಈ ಸಂಬಂಧ ಅಧಿಕಾರಿಗಳು ಹಾಗೂ ಬೆಂಗಳೂರಿನ ಪ್ರಮುಖರನ್ನು ಒಳಗೊಂಡ ಒಂದು ಸಮಿತಿ ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ.

Share This Article
Leave a comment