ಬೆಂಗಳೂರು: ವಿಧಾನಪರಿಷತ್‍ನ 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಮಾಜಿ ಶಾಸಕ ಕೆಟಿ ಶ್ರೀಕಂಠೇಗೌಡ ಆಯ್ಕೆಯಾಗಿದ್ದಾರೆ.
ಮೂರು ಬಾರಿ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಗೌಡರ ಪರಿಷತ್ ನ ಸದಸ್ಯ ಅವಧಿ ಇತ್ತೀಚೆಗೆ ಅಂತ್ಯಗೊಂಡಿತ್ತು.
ಉತ್ತಮ ಸಂಸದೀಯ ಪಟುವಾಗಿದ್ದ ಅವರು, ದಕ್ಷಿಣ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದಿಂದ ಚುನಾಯಿತರಾಗಿದ್ದರು. ಜಾತ್ಯಾತೀತ ಜನಾತದಳದ ಹಿರಿಯ ನಾಯಕರಾಗಿದ್ದ ಗೌಡರು ವಾಗ್ಮಿಗಳು.
ಪರಿಷತ್‍ನಲ್ಲಿ ಪ್ರತಿಪಕ್ಷದ ಉಪನಾಯಕ ಸೇರಿದಂತೆ ಹಲವು ಹುದ್ದೆಗಳನ್ನು ಅಲಂಕರಿಸಿದ್ದರು. ಪರಿಷತ್‍ನಲ್ಲಿ ಅವರ ನಡವಳಿಕೆ, ಸಾಧನೆ, ಭಾಗವಹಿಸುವಿಕೆ, ಜನಪರಕಾಳಜಿಯನ್ನು ಪರಿಗಣಿಸಿ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಶ್ರೀಕಂಠೇಗೌಡರಿಗೆ 2022 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು