ಶಿವಮೊಗ್ಗ
ನೀರಿನಿಂದ ಮೈದುಂಬಿ ಕಂಗೊಳಿಸುತ್ತಿರುವ ಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೆ.2ರಂದು ಬಾಗಿನ ಅರ್ಪಿಸಲಿದ್ದಾರೆ.
ಸೆ.೨ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ 12.15ಕ್ಕೆ ಭದ್ರಾ ಜಲಾಶಯದ ಹೆಲಿಪ್ಯಾಡ್’ಗೆ ಆಗಮಿಸುವ ಮುಖ್ಯಮಂತ್ರಿಗಳು ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ಹೆಲಿಕಾಪ್ಟರ್ ಮೂಲಕವೇ ಮಧ್ಯಾಹ್ನ 1.45ಕ್ಕೆ ಅಲ್ಲಿಂದ ಹೊರಡಲಿರುವ ಅವರು, ಅಜ್ಜಂಪುರ ತಾಲೂಕಿನ ಬೆಟ್ಟದ ತಾವರೆಕೆರೆ ಗ್ರಾಮಕ್ಕೆ ಆಗಮಿಸಿ, ಭದ್ರಾ ಜಲಾಶಯದಿಂದ ವಾಣಿವಿಲಾಸ ಸಾಗರಕ್ಕೆ ನೀರನ್ನು ಹರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು