November 19, 2024

Newsnap Kannada

The World at your finger tips!

Mahabharat NSA

ಭಗವದ್ಗೀತೆ ಪಠ್ಯಕ್ಕೆ ಸೇರ್ಪಡೆ: ಸಿಎಂ ಜೊತೆ ಚರ್ಚೆಸಿ ನಿರ್ಧಾರ: ಸಚಿವ ನಾಗೇಶ್

Spread the love

ರಾಜ್ಯದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿ ನಿರ್ಧಾರಿಸುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು .

ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ನಾಗೇಶ್ ಮೈಸೂರು ಮಹಾರಾಜರ ಮತ್ತು ಕರ್ನಾಟಕದ ಇತಿಹಾಸದ ಕುರಿತಂತೆ ಒಂದಷ್ಟು ಮಾಹಿತಿಗಳನ್ನು ಪಠ್ಯಕ್ರಮದಲ್ಲಿ ಸೇರಿಸಲಾಗಿದೆ. ಎಲ್ಲಾ ಪೋಷಕರು ನಮ್ಮ ಮಕ್ಕಳು ಜ್ಞಾನ ಸಂಪಾದನೆ ಮಾಡುತ್ತಿದ್ದಾರೆ. ಜ್ಞಾನಶೀಲರಾಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

b c nagesh
ಸಚಿವ ನಾಗೇಶ್

ಹಿಂದೆ ಹಳ್ಳಿಗಳಲ್ಲಿ ರಾಮಾಯಣ, ಮಹಾಭಾರತ ನಾಟಕಗಳು ನಡೆಯುತ್ತಿದ್ದವು ಹಾಗಾಗಿ ಎಲ್ಲರಲ್ಲಿಯೂ ಸಂಸ್ಕಾರ ಬೆಳೆಯುತ್ತಿತ್ತು. ಆದರೀಗ ಇದರ ಕೊರತೆ ಇದೆ ಎಂದಿದ್ದಾರೆ.

ಗುಜರಾತ್ ಮಾದರಿಯಲ್ಲಿ ರಾಜ್ಯದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ. ಗುಜರಾತ್ ಸರ್ಕಾರದ ನಿರ್ಧಾರ ಉತ್ತಮವಾಗಿ ಇದೆ. ಮಕ್ಕಳಿಗೆ ನೈತಿಕ ವಿಜ್ಞಾನ ವಿಷಯಗಳು ಇವತ್ತು ಬೋಧನೆ ಆಗುತ್ತಿಲ್ಲ. ಹೀಗಾಗಿ ಭಗವದ್ಗೀತೆ ಅಂಶಗಳನ್ನು ತಿಳಿಸುವುದು ಬಹಳ ಮುಖ್ಯ. ರಾಜ್ಯದ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಬಗ್ಗೆ ಸಿಎಂ, ಶಿಕ್ಷಣ ತಜ್ಞರು, ಸಲಹಾ ಸಮಿತಿಗಳ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ- ಕಾಲೇಜುಗಳಲ್ಲಿ ಭಗವದ್ಗೀತೆ ಕಡ್ಡಾಯ ಮಾಡಲು ಗುಜರಾತ್ ಸರ್ಕಾರ ಮುಂದಾಗಿದ್ದು, ಆರನೇ ತರಗತಿಯಿಂದ 12ನೇ ತರಗತಿವರೆಗೂ ಹಿಂದೂ ಧರ್ಮಗ್ರಂಥ ಭಗವದ್ಗೀತೆಯನ್ನು ಬೋಧಿಸುವುದು, ಪಠಣ ಮಾಡಲಾಗುತ್ತದೆ. ಭಗವದ್ಗೀತೆ ಎನ್ನುವುದು ಕೇವಲ ಗ್ರಂಥವಲ್ಲ. ಅದೊಂದು ಜೀವನ ವಿಧಾನ. ನಮ್ಮ ಸಂಸ್ಕೃತಿಯ ಪ್ರತೀಕ. ಇದು ಎಲ್ಲರಿಗೂ ಗೊತ್ತಾಗುವುದು ಅತ್ಯಗತ್ಯ ಎಂದು ಗುಜರಾತ್ ಶಿಕ್ಷಣ ಸಚಿವ ಜಿತು ವಘಾನಿ ಹೇಳಿದ್ದರು.

Copyright © All rights reserved Newsnap | Newsever by AF themes.
error: Content is protected !!