ಕನ್ಯಾಕುಮಾರಿ ಟು ಕಾಶ್ಮೀರದವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 30 ರಂದು ರಾಜ್ಯದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ಆಗಮಿಸಲಿದೆ. ಈ ಯಾತ್ರೆಯ ಯಶಸ್ವಿಗೆ ಕಾಂಗ್ರೆಸ್ ಎಲ್ಲ ಸಿದ್ಧತೆ ಮಾಡಿಕೊಂಡಿದೆ.
ಸೆ.30ರ ಶುಕ್ರವಾರ ಬೆಳಗ್ಗೆ 9 ಗಂಟೆಗೆ ರಾಹುಲ್ ಗಾಂಧಿ ಕರ್ನಾಟಕ ಪ್ರವೇಶಿಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಗುಂಡ್ಲುಪೇಟೆಗೆ ಭೇಟಿ ನೀಡಿ ಪೂರ್ವಸಿದ್ಧತೆ ಪರಿಶೀಲಿಸಿದ್ದಾರೆ.
ರಾಹುಲ್ ಗಾಂಧಿ ಅವರಿಗೆ ಭರ್ಜರಿ ಸ್ವಾಗತ ಕೋರಲು ಅಳವಡಿಸಿದ್ದ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿರೋ ಘಟನೆ ಗುಂಡ್ಲುಪೇಟೆ ಜರುಗಿದೆ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಗಣ್ಯರ ಭಾವಚಿತ್ರ ಇರುವ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. 21 ದಿನಗಳ ಕಾಲ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯಲಿದೆ. ಕನ್ನಡಿಗರಿಗಾಗಿ ಚೆನ್ನೈನ ಜಮೀನು ಮಾರಿ ಆಸ್ಪತ್ರೆ ಕಟ್ಟಿಸಿದ ಹಿರಿಯ ನಟಿ ಲೀಲಾವತಿ
ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಾದ್ಯಂತ ಮೂರು ದಿನ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು