June 7, 2023

Newsnap Kannada

The World at your finger tips!

WhatsApp Image 2022 09 29 at 10.26.12 AM

ಸೆ.30 ರಂದು ರಾಜ್ಯಕ್ಕೆ ಭಾರತ ಐಕ್ಯತಾ ಯಾತ್ರೆ ಪ್ರವೇಶ: ಸ್ವಾಗತಕ್ಕಾಗಿ ಹಾಕಿದ್ದ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

Spread the love

ಕನ್ಯಾಕುಮಾರಿ ಟು ಕಾಶ್ಮೀರದವರೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 30 ರಂದು ರಾಜ್ಯದ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಗೆ ಆಗಮಿಸಲಿದೆ. ಈ ಯಾತ್ರೆಯ ಯಶಸ್ವಿಗೆ ಕಾಂಗ್ರೆಸ್ ಎಲ್ಲ ಸಿದ್ಧತೆ ಮಾಡಿಕೊಂಡಿದೆ.

ಸೆ.30ರ ಶುಕ್ರವಾರ ಬೆಳಗ್ಗೆ 9 ಗಂಟೆಗೆ ರಾಹುಲ್ ಗಾಂಧಿ ಕರ್ನಾಟಕ ಪ್ರವೇಶಿಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಗುಂಡ್ಲುಪೇಟೆಗೆ ಭೇಟಿ ನೀಡಿ ಪೂರ್ವಸಿದ್ಧತೆ ಪರಿಶೀಲಿಸಿದ್ದಾರೆ.

ರಾಹುಲ್​ ಗಾಂಧಿ ಅವರಿಗೆ ಭರ್ಜರಿ ಸ್ವಾಗತ ಕೋರಲು ಅಳವಡಿಸಿದ್ದ ಫ್ಲೆಕ್ಸ್ ​ಗಳನ್ನು ಕಿಡಿಗೇಡಿಗಳು ಹರಿದು ಹಾಕಿರೋ ಘಟನೆ ಗುಂಡ್ಲುಪೇಟೆ ಜರುಗಿದೆ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಗಣ್ಯರ ಭಾವಚಿತ್ರ ಇರುವ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. 21 ದಿನಗಳ ಕಾಲ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯಲಿದೆ. ಕನ್ನಡಿಗರಿಗಾಗಿ ಚೆನ್ನೈನ ಜಮೀನು ಮಾರಿ ಆಸ್ಪತ್ರೆ ಕಟ್ಟಿಸಿದ ಹಿರಿಯ ನಟಿ ಲೀಲಾವತಿ

ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಾದ್ಯಂತ ಮೂರು ದಿನ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್​ ಆದೇಶ ಹೊರಡಿಸಿದ್ದಾರೆ.

error: Content is protected !!