‘ ಭಾರತ್ ಜೋಡೋ’ ಯಾತ್ರೆಯು ಶನಿವಾರ ರಾಯಚೂರಲ್ಲಿ ನಡೆಯುತ್ತಿದೆ. ರಾಹುಲ್ ಗಾಂಧಿ ಜೊತೆ ಮೋಹಕ ತಾರೆ ರಮ್ಯಾ ಐಕ್ಯತಾ ಯಾತ್ರೆಯಲ್ಲಿ ಹೆಜ್ಜೆ ಹಾಕಿ ಗಮನ ಸೆಳೆದಿದ್ದಾರೆ.
ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ರಾಹುಲ್ ಗಾಂಧಿ ಐಕ್ಯತಾ ಯಾತ್ರೆಯಲ್ಲಿ ರಮ್ಯಾ ಭಾರತ್ ಜೋಡೋ ಯಾತ್ರೆಯಲ್ಲಿ ದಿಢೀರ್ ಎಂದು ಭಾಗಿಯಾಗಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ, ರಾಹುಲ್ ಗಾಂಧಿ ರಮ್ಯಾರ ಕೈ ಹಿಡಿದುಕೊಂಡು ಹೆಜ್ಜೆ ಹಾಕ್ತಿರೋದನ್ನು ಗಮನಿಸಬಹುದು. ರಾಯಚೂರಿನ ಹೊರವಲಯದ ಬೃಂದಾವನ ಹೋಟೆಲ್ನಿಂದ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.
ಎಐಸಿಸಿ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ ಸ್ಥಾನದಿಂದ ಹೊರ ಬಂದ ಬಳಿಕ ರಮ್ಯಾ, ರಾಹುಲ್ ಗಾಂಧಿಯನ್ನು ಸಾರ್ವಜನಿಕವಾಗಿ ಎಲ್ಲಿಯೂ ಭೇಟಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ಜೊತೆ ರಮ್ಯಾ ಕಾಣಿಸಿಕೊಂಡಿದ್ದಾರೆ. ರಮ್ಯಾರನ್ನು ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು