ನವದೆಹಲಿ : 96 ರ ವಯೋಮಾನದ , ಬಿಜೆಪಿ ಭೀಷ್ಮ ,ಮಾಜಿ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಘೋಷಣೆ ಮಾಡಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಎಕ್ಸ್ ನಲ್ಲಿ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಎಲ್ ಕೆ ಅಡ್ವಾಣಿಯವರಿಗೆ ಭಾರತ ರತ್ನ ಪ್ರಶಸ್ತಿ ಗೌರವ ನೀಡುತ್ತಿರುವ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ.
ಈ ಕುರಿತು ನಾನು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅವರಿಗೆ ಖುದ್ದಾಗಿ ಈ ವಿಷಯ ತಿಳಿಸಿದ್ದು ಅದನ್ನು ಕೇಳಿ ಅವರು ಬಹಳ ಖುಷಿಪಟ್ಟರು ಎಂದು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ಹೇಳಿಕೊಂಡಿದ್ದಾರೆ.
ಕಳೆದ ತಿಂಗಳು ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಂಡಿತು. ರಾಮ ಮಂದಿರ ಹೋರಾಟದ ರೂವಾರಿ, ಬಿಜೆಪಿ ಭೀಷ್ಮ ಎಂದೇ ಜನಪ್ರಿಯರು ಅಡ್ವಾಣಿಯವರು. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೊಂಡ ಬೆನ್ನಲ್ಲೇ ಬಿಹಾರದ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ಘೋಷಣೆ ಮಾಡಲಾಗಿತ್ತು. ಅದಾದ ಒಂದೇ ವಾರದಲ್ಲಿ ಅಡ್ವಾಣಿಯವರಿಗೆ ಭಾರತ ರತ್ನ ಗೌರವ ಘೋಷಣೆಯಾಗಿದೆ.
ಅಡ್ವಾಣಿ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ 2002 ರಿಂದ 2004 ರವರೆಗೆ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಅದಕ್ಕೂ ಮೊದಲು ಕೇಂದ್ರ ಗೃಹ ಖಾತೆ ಸೇರಿದಂತೆ ಹಲವು ಸಚಿವಾಲಯಗಳ ಸಚಿವರಾಗಿದ್ದರು.ಶೀಘ್ರವೆ ನಮ್ಮ ಮೆಟ್ರೋ ಗೆ ಬರಲಿದೆ ಹೊಸ QR ಕೋಡ್ ಆ್ಯಪ್
1970 ಮತ್ತು 2019 ರ ನಡುವೆ ಸಂಸತ್ತಿನ ಉಭಯ ಸದನಗಳ ಸದಸ್ಯರಾಗಿದ್ದರು ಕೆ ಅಡ್ವಾಣಿ ಅವರು 1980 ರಲ್ಲಿ ಭಾರತೀಯ ಜನತಾ ಪಕ್ಷದ ಪ್ರಾರಂಭದಿಂದಲೂ ಸುದೀರ್ಘ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸಮ್ಮಿಶ್ರ ಸರ್ಕಾರಗಳ ಮುಖ್ಯಸ್ಥರಾಗಿ 90 ರ ದಶಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಅದರ ಬೆಳವಣಿಗೆಯನ್ನು ರೂಪಿಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ.
More Stories
ರಾಜ್ಯಗಳಾದ್ಯಂತ `ED’ ದಾಳಿ: ಲಾಟರಿ ಕಿಂಗ್ ಮಾರ್ಟಿನ್ನ 12.41 ಕೋಟಿ ನಗದು ಜಪ್ತಿ
ರಾಜ್ಯದಲ್ಲಿ ಶೀಘ್ರವೇ 14 ಲಕ್ಷ ಬಿಪಿಎಲ್ ಕಾರ್ಡ್ಗಳು ರದ್ದು: ಸರ್ಕಾರದಿಂದ ಸ್ಪಷ್ಟನೆ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ