ಗಾಂಜಾ ಸಂಗ್ರಹ ಮತ್ತು ಬಳಕೆಯ ಆರೋಪದ ಮೇಲೆ ಹಾಸ್ಯನಟಿ ಭಾರತಿ ಸಿಂಗ್ ಹಾಗೂ ಪತಿ ಹರ್ಷ ಲಿಂಬಾಚಿಯಾ ಅವರನ್ನು ಎನ್‌ಸಿಬಿ ಇಂದು ಬಂಧಿಸಿದೆ.
ಎನ್‌ಸಿಬಿ ಅಧಿಕಾರಿಗಳು ನಿನ್ನೆಯಷ್ಟೇ ಹಾಸ್ಯನಟಿ ಭಾರ್ತಿ ಸಿಂಗ್ ಮತ್ತು ಅವರ ಪತಿ ಹರ್ಷ ಅವರ ನಿವಾಸದ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿ, ಅಲ್ಪಪ್ರಮಾಣದ ಮಾದಕ ವಸ್ತು ವಶಪಡಿಸಿಕೊಂಡಿದ್ದರು.
ಹಾಸ್ಯನಟಿಯನ್ನು ಎನ್‌ಡಿಪಿಎಸ್ ಕಾಯ್ದೆ 1986ರ ನಿಬಂಧನೆಗಳ ಅಡಿಯಲ್ಲಿ ನಿನ್ನೆ ವಶಕ್ಕೆ ಪಡೆದು ವಿಚಾರಣೆ ನಂತರ ಇಂದು ಬಂಧಿಸಿದ್ದಾರೆ.
ನಿನ್ನೆಯಿಂದ ಹರ್ಷ್ ಲಿಂಬಾಚಿಯಾ ಅವರ ವಿಚಾರಣೆ ನಡೆಸಿದ ಎನ್‌ಸಿಬಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಭಾರತಿ ಮತ್ತು ಅವರ ಪತಿ ಇಬ್ಬರೂ ಗಾಂಜಾ ಸೇವನೆ ಒಪ್ಪಿಕೊಂಡಿದ್ದಾರೆ ಎಂದು ಎನ್‌ಸಿಬಿ ಹೇಳಿಕೆಯಲ್ಲಿ ತಿಳಿಸಿದೆ.
ಪೆಡ್ಲರ್‌ರೊಬ್ಬರ ವಿಚಾರಣೆ ವೇಳೆ ಭಾರತಿ ಸಿಂಗ್ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರ ನಿರ್ಮಾಣ ಕಚೇರಿ ಮತ್ತು ನಿವಾಸದ ಮೇಲೆ ದಾಳಿ ನಡೆಸಿದ್ದರು. ಭಾರತಿ ಸಿಂಗ್ ಹಲವು ಕಾಮಿಡಿ ಮತ್ತು ರಿಯಾಲಿಟಿ ಷೋಗಳಲ್ಲಿ ಕಾಣಿಸಿ ಕೊಂಡಿದ್ದಾರೆ, ಕೆಲವು ಷೋಗಳನ್ನು ನಡೆಸಿಕೊಡುತ್ತಾರೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )